ಶಿವಮೊಗ್ಗ:ನೆರೆ ಹಾವಳಿಗೆ ತುತ್ತಾದವರ ಸಹಾಯಕ್ಕೆ ಧಾವಿಸಿದ ರಾಜ್ಯ ಸರ್ಕಾರದ ಛಾಯಾಚಿತ್ರ ಪ್ರದರ್ಶನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
ನೆರೆ ಸಂತ್ರಸ್ತರ ನೆರವಿಗೆ ಧಾವಿಸಿದ ಸರ್ಕಾರದ ಛಾಯಾಚಿತ್ರ ಪ್ರದರ್ಶನ - ಶಿವಮೊಗ್ಗದಲ್ಲಿ ನೆರೆ ಹಾವಳಿ ಛಾಯಾ ಚಿತ್ರ ಪ್ರದರ್ಶನ
ಶಿವಮೊಗ್ಗದ ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ನೆರೆ ಹಾವಳಿ ಸಂದರ್ಭದಲ್ಲಿ ಸರ್ಕಾರ ಸಹಾಯಕ್ಕೆ ಧಾವಿಸಿದ ಛಾಯಾಚಿತ್ರ ಪ್ರದರ್ಶನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ಛಾಯಾಚಿತ್ರ ಪ್ರದರ್ಶನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು
ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ
ಇಲ್ಲಿನ ಕೇಂದ್ರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ಈ ಪ್ರದರ್ಶನ ಏರ್ಪಡಿಸಲಾಗಿತ್ತು.
ನೆರೆ ಹಾವಳಿಗೆ ತತ್ತರಿಸಿದ ಪ್ರದೇಶಗಳಿಗೆ ಬಿಜೆಪಿ ತುರ್ತು ಕ್ರಮ ತೆಗೆದುಕೊಂಡಿದ್ದು ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಫೋಟೋಗಳನ್ನು ಹಾಕಲಾಗಿತ್ತು. ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯದ ಮಂತ್ರಿಗಳು ನೆರೆ ಪ್ರದೇಶಕ್ಕೆ ಭೇಟಿ ನೀಡದ ದೃಶ್ಯಗಳನ್ನು ಪ್ರದರ್ಶಿಸಲಾಗಿತ್ತು.