ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇಂದು ಮಧ್ಯಾಹ್ನ ದಾಂಪತ್ಯಕ್ಕೆ ಕಾಲಿಟ್ಟ ವಧು-ವರರು ನೇರವಾಗಿ ಮತಗಟ್ಟೆಗೆ ಬಂದು ಲೋಕಸಭಾ ಚುನಾವಣೆಯಲ್ಲಿ ಮತ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಹಸೆಮಣೆಯಿಂದ ನೇರವಾಗಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ಜೋಡಿ - ನವವಧುವರರು
ಹಸೆಮಣೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವ ಮೂಲಕ ಇತರರಿಗೆ ಮಾದರಿಯಾದ ನವ ವಧು-ವರರು.
ಮತದಾನ ಮಾಡಿದ ನವದಂಪತಿ
ಜಿಲ್ಲೆಯ ಹೊಸನಗರ ತಾಲೂಕಿನ ಜಾಲಬೈದೂರು ಎಂಬಲ್ಲಿ ಇಂದು ಮಧ್ಯಾಹ್ನ ದಾಂಪತ್ಯಕ್ಕೆ ಕಾಲಿಟ್ಟ ವಧು-ವರರಾದ ಯುವರಾಜ್ ಮತ್ತು ನಳಿನ ಎಂಬ ಜೋಡಿ, ಹಸೆಮಣೆಗೆ ಕಾಲಿಟ್ಟ ನಂದತರ ನೇರವಾಗಿ ಕೆಬಿ ಸರ್ಕಲ್ನ ಮತಗಟ್ಟೆಗೆ ಬಂದು ಮತ ಹಾಕುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.