ಕರ್ನಾಟಕ

karnataka

ETV Bharat / state

ಮುಂದಿನ ದಿನಗಳಲ್ಲಿ ಯುವಕರಿಗೆ ಜಿಲ್ಲೆಯಲ್ಲೇ ಉದ್ಯೋಗ ಸಿಗಲಿದೆ: ಬಿ.ವೈ.ರಾಘವೇಂದ್ರ - ಶಿವಮೊಗ್ಗ

ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು, ಕೃಷಿ ವಿಶ್ವವಿದ್ಯಾಲಯ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಯುವಕರಿಗೆ ಇಲ್ಲೇ ಉದ್ಯೋಗ ಸಿಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು.

BY Raghavendra

By

Published : Oct 1, 2019, 6:41 AM IST

ಶಿವಮೊಗ್ಗ :ಮುಂದಿನ ದಿನಗಳಲ್ಲಿ ಜಿಲ್ಲೆಯ ಯುವಕರಿಗೆ ಉದ್ಯೋಗಗಳು ಸಿಗಲಿವೆ ಎಂದು ಸಂಸದ ಬಿ.ವೈ ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಸದ ಬಿ.ವೈ ರಾಘವೇಂದ್ರ

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು, ಕಳೆದ 15 ವರ್ಷಗಳ ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಯಾಕೆ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ ಹೊಂದುತ್ತಿಲ್ಲ ಎಂದು ಸ್ನೇಹಿತರೊಂದಿಗೆ ಚರ್ಚಿಸುತ್ತಿದ್ದೆವು. ಆದರೆ ದೇವರ ಆಶೀರ್ವಾದದಿಂದ, ತಂದೆಯವರು ರಾಜ್ಯದ ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ನಂತರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು, ಕೃಷಿ ವಿಶ್ವವಿದ್ಯಾಲಯ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಿದೆ ಎಂದರು.

ಎಲ್ಲಾ ರೀತಿಯ ವಿಶ್ವವಿದ್ಯಾಲಯಗಳು, ಕಾಲೇಜುಗಳು ನಮ್ಮಲ್ಲಿರುವುದರಿಂದ ಬೇರೆಡೆ ವಿದ್ಯಾಭ್ಯಾಸಕ್ಕೆ ಹೋಗುತ್ತಿದ್ದ ಜಿಲ್ಲೆಯ ವಿದ್ಯಾರ್ಥಿಗಳು ಇಂದು ನಮ್ಮ ಜಿಲ್ಲೆಯಲ್ಲಿಯೇ ವಿದ್ಯಾಭ್ಯಾಸ ಮಾಡುವಂತಾಗಿದೆ. ಇಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ನಿಂತುಹೋಗಿತ್ತು. ಮತ್ತೆ ನಿರ್ಮಾಣವಾಗುತ್ತಿದ್ದು, ಕೈಗಾರಿಕೋದ್ಯಮಿಗಳು ಬರುತ್ತಾರೆ. ಇದರಿಂದ ಇಲ್ಲಿನ ಯುವಕರಿಗೆ ಉದ್ಯೋಗ ಸಿಗಲಿದೆ ಎಂಬ ಭರವಸೆ ನೀಡಿದರು.

ABOUT THE AUTHOR

...view details