ಕರ್ನಾಟಕ

karnataka

ETV Bharat / state

ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರದಲ್ಲಿ ಅಸಮಾಧಾನ ಇಲ್ಲ: ಕೆ.ಎಸ್. ಈಶ್ವರಪ್ಪ - ನಾರಾಯಣ ಗೌಡರಿಗೆ ಶಿವಮೊಗ್ಗ ಜಿಲ್ಲಾಉಸ್ತುವಾರಿ

ರಾಜ್ಯದ ಎಲ್ಲಾ ಸಚಿವರು ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತೇವೆ. ಲೋಕಸಭೆಯಲ್ಲಿ ಸಹ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಮ್ಮ ಪಕ್ಷದ ಶಾಸಕರಿಲ್ಲ. ಮುಂದಿನ ಚುನಾವಣೆಯಲ್ಲಿ ಅಲ್ಲೂ ಸಹ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ..

ishwarappa
ಕೆ.ಎಸ್. ಈಶ್ವರಪ್ಪ

By

Published : Jan 24, 2022, 7:28 PM IST

ಶಿವಮೊಗ್ಗ :ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ವಿಚಾರದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಬದಲಾವಣೆ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿರುವುದು..

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಪುಟ ಪುನರ್ ರಚನೆಗೂ ಹಾಗೂ ಜಿಲ್ಲಾ ಉಸ್ತುವಾರಿಗಳ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ. ಕನ್ನಡಮ್ಮನ ಪಲ್ಲಕ್ಕಿ ಹೊರಲು ಎಡಕ್ಕಾದರೇನು, ಬಲಕ್ಕಾದರೇನು. ಯಾವ ಜಿಲ್ಲೆಯಾದರೇನು, ಈಗ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಕೊಟ್ಟಿದ್ದಾರೆ.

ಆ ಜಿಲ್ಲೆಯ ಅಭಿವೃದ್ಧಿ ಜೊತೆಗೆ ರಾಜ್ಯದ ಅಭಿವೃದ್ಧಿ ಮಾಡುತ್ತೇನೆ. ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕೊಟ್ಟಿದಕ್ಕೆ ಬಹಳ ಸಂತೋಷ ಇದೆ. ಹಾಗಾಗಿ, ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ: ಖಾಲಿ ಇರುವ ಸಚಿವ ಸ್ಥಾನ ತುಂಬುವ ಕುರಿತು ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ: ಕೆ. ಎಸ್. ಈಶ್ವರಪ್ಪ

ರಾಜ್ಯದ ಎಲ್ಲಾ ಸಚಿವರು ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತೇವೆ. ಲೋಕಸಭೆಯಲ್ಲಿ ಸಹ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಮ್ಮ ಪಕ್ಷದ ಶಾಸಕರಿಲ್ಲ. ಮುಂದಿನ ಚುನಾವಣೆಯಲ್ಲಿ ಅಲ್ಲೂ ಸಹ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.

ನಾರಾಯಣ ಗೌಡರಿಗೆ ಶಿವಮೊಗ್ಗ ಕೊಟ್ಟಿದ್ದಾರೆ. ಅವರು ಸಹ ಭದ್ರಾವತಿಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ತರುವ ಕಡೆ ಗಮನ ಹರಿಸಲಿ. ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details