ಕರ್ನಾಟಕ

karnataka

ETV Bharat / state

ನಾನು ಗೆದ್ದರೆ ಒಂದು ಕನ್ನಡ ಶಾಲೆ ಕೂಡ ಮುಚ್ಚಲು ಬಿಡುವುದಿಲ್ಲ : ಡಾ.ಮಹೇಶ್ ಜೋಶಿ - No Kannada school should be closed

ಮೇ 9ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು..

Dr. Mahesh Joshi
ಡಾ.ಮಹೇಶ್ ಜೋಶಿ

By

Published : Feb 16, 2021, 9:19 PM IST

ಶಿವಮೊಗ್ಗ:ಮೇ 9ರಂದು ನಡೆಯುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ನನ್ನನ್ನು ಗೆಲ್ಲಿಸಿ ಎಂದು ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಾಕಾಂಕ್ಷಿ ನಾಡೋಜ ಡಾ.ಮಹೇಶ್ ಜೋಶಿ ಮತದಾರರಲ್ಲಿ ಮನವಿ ಮಾಡಿಕೊಂಡರು.

ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಈ ನಾಡಿನ ಸಾಹಿತ್ಯ, ನಾಡು-ನುಡಿ ನೆಲ-ಜಲದ ಉಳಿವಿಗಾಗಿ ಕನ್ನಡದ ಪರಿಚಾರಕನಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್​ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ.

ಹಾಗಾಗಿ, ಮೇ 9ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಾಡೋಜ ಡಾ.ಮಹೇಶ್ ಜೋಶಿ

ಕನ್ನಡ ಸಾಹಿತ್ಯ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ ಆಗಿ ಮಾಡುವ ಕನಸಿದೆ, ನನ್ನ ಅವಧಿಯಲ್ಲಿ ಒಂದು ಕನ್ನಡ ಶಾಲೆ ಕೂಡ ಮುಚ್ಚಬಾರದು ಹಾಗೂ ಮುಚ್ಚಿರುವ ಕನ್ನಡ ಶಾಲೆಗಳನ್ನು ಮತ್ತೆ ಪ್ರಾರಂಭಿಸುವುದು, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ, ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯುವಂತೆ ಅವಕಾಶ ಕೊಡಿಸುವಂತಹ ಕೆಲಸಗಳನ್ನು ಮಾಡುತ್ತೇನೆ ಎಂದರು.

ABOUT THE AUTHOR

...view details