ಕರ್ನಾಟಕ

karnataka

ETV Bharat / state

ಸಿಎಂ ತವರು ಜಿಲ್ಲೆಯಲ್ಲೇ ಅವ್ಯವಸ್ಥೆ ಆರೋಪ: ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಸೊಂಕಿತರಿಗಿಲ್ಲ ಸೂಕ್ತ ಚಿಕಿತ್ಸೆ! - ಮೆಗ್ಗಾನ್ ಕೋವಿಡ್ ಆಸ್ಪತ್ರೆ

ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಇಲ್ಲಿ ಹಿರಿಯ ವೈದ್ಯರು ಬಾರದೆ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕಳುಹಿಸುತ್ತಾರೆ. ಅಲ್ಲದೆ ಇಲ್ಲಿನ ನರ್ಸ್​ಗಳು ಸಹ ಯಾವುದೇ ರೀತಿಯಲ್ಲಿ ಸ್ಪಂದಿಸುವುದಿಲ್ಲ ಎಂದು ಮೃತನ ಸಂಬಂಧಿಯೊಬ್ಬರು ಆರೋಪಿಸಿದ್ದಾರೆ.

covid patient
ಕೋವಿಡ್ ಆಸ್ಪತ್ರೆ

By

Published : Jul 27, 2020, 7:03 PM IST

ಶಿವಮೊಗ್ಗ: ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದ ಆಸ್ಪತ್ರೆಯಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವುದಿಲ್ಲವೆಂದು ಆರೋಪಿಸಿದ ಕುಟುಂಬಸ್ಥರು

ನಿನ್ನೆ ಹುಷಾರಿಲ್ಲವೆಂದು ಕೆ.ಆರ್. ಪುರಂ ರಸ್ತೆಯ‌ ನಿವಾಸಿ 60 ವರ್ಷದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಆದರೆ ಇವರಿಗೆ‌ ಕೊರೊನಾ ಇದೆ ಎಂದು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಪಟ್ಟಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಇಲ್ಲಿ ಹಿರಿಯ ವೈದ್ಯರು ಬಾರದೆ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕಳುಹಿಸುತ್ತಾರೆ. ಅಲ್ಲದೆ ಇಲ್ಲಿನ ನರ್ಸ್​ಗಳು ಸಹ ಯಾವುದೇ ರೀತಿಯಲ್ಲಿ ಸ್ಪಂದಿಸುವುದಿಲ್ಲ. ಸೋಂಕಿತರಿಗೆ ನೀಡಲು ಆಕ್ಸಿಜನ್ ವ್ಯವಸ್ಥೆ ಇಲ್ಲ. ಇದರಿಂದ ನಮ್ಮ ಚಿಕ್ಕಪ್ಪ ಸಾವನ್ನಪ್ಪಿದ್ದಾರೆ ಎಂದು ಮೃತನ ಅಣ್ಣನ ಮಗ ಸೈಯದ್ ವಾಹಿಬ್ ಅಡ್ಡು ಆರೋಪ ಮಾಡಿದ್ದಾರೆ.

ಸಿಎಂ ತವರು ಜಿಲ್ಲೆಯಲ್ಲಿ‌ ಇಂತಹ ಅವವ್ಯಸ್ಥೆ ಇದೆ. ರೋಗಿಗಳ ಜೀವ ಉಳಿಸಬೇಕಾದವರ ನಿರ್ಲಕ್ಷ್ಯಕ್ಕೆ ಸೋಂಕಿತರು ಪ್ರಾಣ ಕಳೆದುಕೊಳ್ಳಬೇಕಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪ ಅವರು ಇತ್ತ ಗಮನ ಹರಿಸಿ, ನಮಗಾದ ಅನ್ಯಾಯ ಬೇರೆಯವರಿಗೆ ಆಗದಂತೆ ತಡೆಯಬೇಕು ಎಂದು ಸೈಯದ್ ವಾಹಿಬ್ ಅಡ್ಡು ಕೈಮುಗಿದು ಕೇಳಿಕೊಂಡಿದ್ದಾರೆ.

ABOUT THE AUTHOR

...view details