ಶಿವಮೊಗ್ಗ:ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಮೂರನೇ ಹಂತದ ಲಾಕ್ಡೌನ್ ಘೋಷಣೆಯಾಗಿದೆ. ಆದರೆ, ಶಿವಮೊಗ್ಗದಲ್ಲಿ ಮಾತ್ರ ಲಾಕ್ಡೌನ್ಗೆ ಯಾವುದೇ ಕಿಮ್ಮತ್ತು ನೀಡುತ್ತಿಲ್ಲ. ಯಥಾವತ್ತಾಗಿ ಮೊದಲಿನಂತೆ ದಿನ ನಿತ್ಯದ ಕಾರ್ಯಗಳು ಆರಂಭಗೊಂಡಿವೆ.
ಜಿಲ್ಲೆಯಲ್ಲಿ ಈವರೆಗೂ ಯಾವುದೇ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿವೆ.