ಕರ್ನಾಟಕ

karnataka

ETV Bharat / state

ತೈಲ ಬೆಲೆ ಏರಿಕೆಗೆ ವಿರೋಧ: ಎನ್​ಎಸ್​ಯುಐ ಸಂಘಟನೆಯಿಂದ ಪ್ರತಿಭಟನೆ - ಎನ್​ಎಸ್​ಯುಐ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ತೈಲ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ಎನ್​ಎಸ್​ಯುಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸೈಕಲ್ ಓಡಿಸಿ ಆಕ್ರೋಶ ವ್ಯಕ್ತಪಡಿಸಿದರು.

Protest in Shimoga
ಎನ್​ಎಸ್​ಯುಐ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

By

Published : Jul 7, 2020, 2:42 PM IST

ಶಿವಮೊಗ್ಗ: ನಿರಂತರ ತೈಲ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಎನ್​ಎಸ್​ಯುಐ ಸಂಘಟನೆ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಎನ್​ಎಸ್​ಯುಐ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸೈಕಲ್ ಓಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಎನ್​ಎಸ್​ಯುಐ ರಾಜ್ಯ ಉಪಾಧ್ಯಕ್ಷ ಚೇತನ್, ಕೇಂದ್ರ ಸರ್ಕಾರ ದಿನೇ ದಿನೆ ತೈಲ ಬೆಲೆ ಏರಿಕೆ ಮಾಡುತ್ತಿದ್ದರೆ, ಜನಸಾಮಾನ್ಯರು ತಮ್ಮ ಬೈಕ್​ಗಳನ್ನು ಬಿಟ್ಟು ಸೈಕಲ್ ಓಡಿಸುವಂತಾಗುತ್ತದೆ. ಕೊರೊನಾದಿಂದ ಪ್ರಪಂಚವೇ ತತ್ತರಿಸಿ ಹೋಗಿದೆ. ಇದರಿಂದ ತೈಲ ಬೆಲೆ ಇಳಿಕೆಯಾಗಿದೆ. ಪ್ರತಿ ದಿನ ಬ್ಯಾರಲ್ ದರ ಇಳಿಕೆಯಾದರೂ ಸಹ ಭಾರತ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಏರಿಕೆ ಮಾಡುತ್ತಿದೆ. ಇದು ಜನ ಸಾಮಾನ್ಯರ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದರು.

ತಕ್ಷಣ ಕೇಂದ್ರ ಸರ್ಕಾರ ತೈಲ ಬೆಲೆ‌ಯನ್ನು ಇಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಮಧುಸೂಧನ್, ಬಾಲಾಜಿ, ಮಂಜು ಸೇರಿದಂತೆ ಇತರರು ಹಾಜರಿದ್ದರು.

ABOUT THE AUTHOR

...view details