ಶಿವಮೊಗ್ಗ :ಒಂದು ದೇಶ ಒಂದು ಚುನಾವಣೆ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲು ಆಗಮಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ನಗರದ ಈದ್ಗಾ ಮೈದಾನದ ಬಳಿ ಕಪ್ಪು ಪಟ್ಟಿ ಧರಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟಿಸಿದರು.
'ಗೋ ಬ್ಯಾಕ್ ಚಕ್ರವರ್ತಿ'.. ಕಪ್ಪು ಪಟ್ಟಿ ಧರಿಸಿ ಎನ್‌ಎಸ್‌ಯುಐ ಪ್ರತಿಭಟನೆ.. - Protests in Shivamogga
ಸುಳ್ಳು ಹೇಳಿ ಯುವಕರನ್ನು ದಾರಿ ತಪ್ಪಿಸುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರು ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಒಂದು ದೇಶ ಒಂದು ಚುನಾವಣೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಬಾರದು..
ಎನ್‌ಎಸ್‌ಯುಐ ಕಾರ್ಯಕರ್ತರಿಂದ ಪ್ರತಿಭಟನೆ
ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ವಿಶೇಷ ಉಪನ್ಯಾಸ ನೀಡಲು ಆಗಮಿಸಿದ ಚಕ್ರವರ್ತಿ ಸೂಲಿಬೆಲೆ ಅವರಿಗೆ ಗೋ ಬ್ಯಾಕ್ ಚಕ್ರವರ್ತಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸುಳ್ಳು ಹೇಳಿ ಯುವಕರನ್ನು ದಾರಿ ತಪ್ಪಿಸುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರು ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಒಂದು ದೇಶ ಒಂದು ಚುನಾವಣೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಬಾರದು ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಒತ್ತಾಯಿಸಿದರು.