ಶಿವಮೊಗ್ಗ: ನಂದಿತಾ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಎನ್ಎಸ್ಯುಐ ಕಾರ್ಯಕರ್ತರಿಂದ ಮನವಿ ಸಲ್ಲಿಸಲಾಯಿತು.
ನಂದಿತಾ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಆಗ್ರಹಿಸಿ ಮನವಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿ ನಂದಿತಾ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಎನ್ಎಸ್ಯುಐ ಕಾರ್ಯಕರ್ತರಿಂದ ಮನವಿ ಸಲ್ಲಿಸಲಾಯಿತು.
2014ರ ಅಕ್ಟೋಬರ್ 31ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿ ನಂದಿತಾ ನಿಗೂಢವಾಗಿ ಸಾವನ್ನಪ್ಪಿದ್ದಳು. ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಹಾಗಾಗಿ ನಂದಿತಾ ನಿಗೂಢ ಸಾವಿನ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಮೂಲಕ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕು. ಈ ಪ್ರಕರಣದಲ್ಲಿ ಯಾರೇ ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇನ್ನು ತನಿಖೆಯನ್ನು ಸಿಬಿಐಗೆ ವಹಿಸಲು ವಿಳಂಬ ಮಾಡಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.