ಶಿವಮೊಗ್ಗ :ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಹಾಗೂ ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ವಿರೋಧಿಸಿ ಎನ್ಎಸ್ಯುಐ ಸಂಘಟನೆ ತಟ್ಟೆ ಬಾರಿಸುವ ಮೂಲಕ ಪ್ರತಿಭಟಿಸಿತು.
ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಎನ್ಎಸ್ಯುಐ ಕಾರ್ಯಕರ್ತರು ತಟ್ಟೆ ಬಾರಿಸುವ ಮೂಲಕ ಕೇಂದ್ರದ ರೈತ ವಿರೋಧಿ ನೀತಿ ಖಂಡಿಸಿದರು. ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ, ಭೂ ಒಡೆತನದ ಹಕ್ಕು ನೀಡುವಂತಹ ರೈತರಿಗೆ ಮಾರಕವಾದ ಕಾನೂನುಗಳನ್ನ ಜಾರಿಗೆ ತಂದಿದೆ. ಆ ಮೂಲಕ ರೈತರನ್ನು ಬೀದಿಯಲ್ಲಿ ನಿಲ್ಲಿಸುವ ಕೆಲಸ ಮಾಡುತ್ತಿದೆ.
ಈ ಕಾಯ್ದೆಗಳು ಕಾರ್ಪೊರೇಟ್ ವಲಯಕ್ಕೆ ಅನುಕೂಲವಾಗುವಂತಿವೆ. ಇದರಿಂದ ಆಹಾರ ಪದಾರ್ಥಗಳ ಮೇಲೆ ಕಾರ್ಪೊರೇಟ್ ವಲಯ ಏಕಸ್ವಾಮ್ಯ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಇದರಿಂದ ದೇಶದ ಆಹಾರ ವ್ಯವಸ್ಥೆ ಬುಡಮೇಲಾಗುತ್ತದೆ ಎಂದರು.