ಶಿವಮೊಗ್ಗ :ದೇಶದ ವಿದ್ಯಾವಂತ ಯುವಜನತೆಗೆ ಉದ್ಯೋಗ ಸೃಷ್ಟಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
'ಯುವಜನತೆಗೆ ಉದ್ಯೋಗ ಸೃಷ್ಟಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲ' - NSUI Protest
ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ, ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ವಿದ್ಯಾವಂತ ಯುವಜನತೆಗೆ ಉದ್ಯೋಗ ನೀಡುವಲ್ಲಿ ಯಾವುದೇ ರೀತಿಯ ಪರಿಣಾಮಕಾರಿ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಈವರೆಗೂ ತೆಗೆದುಕೊಂಡಿಲ್ಲ..
ನಗರದ ಮಹಾವೀರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ, ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ವಿದ್ಯಾವಂತ ಯುವಜನತೆಗೆ ಉದ್ಯೋಗ ನೀಡುವಲ್ಲಿ ಯಾವುದೇ ರೀತಿಯ ಪರಿಣಾಮಕಾರಿ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಈವರೆಗೂ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಪರಿಣಾಮ ಅನೇಕ ವಿದ್ಯಾವಂತರು ಇಂದು ಉದ್ಯೋಗ ಇಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ಇವೆಲ್ಲದ್ದಕ್ಕೂ ಕಾರಣ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂದು ಆರೋಪಿಸಿ, ಘೋಷಣೆ ಕೂಗಿ ತಾವು ಪಡೆದಿರುವ ಪದವಿಗಳ ನಾಮಫಲಕ ಧರಿಸಿಕೊಂಡು ಟೀ, ಪೇಪರ್, ಮಾಸ್ಕ್ ಮಾರುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು.