ಶಿವಮೊಗ್ಗ:ರಾಜ್ಯ ಸರ್ಕಾರ ನೀಡುತ್ತಿರುವ ಲ್ಯಾಪ್‌ಟಾಪ್ ಸೌಲಭ್ಯವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್ಎಸ್ಯುಐ ಪ್ರತಿಭಟನೆ ನಡೆಸಿದೆ.
ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲು ಆಗ್ರಹಿಸಿ ಎನ್ಎಸ್ಯುಐ ಪ್ರತಿಭಟನೆ.. ಜಿಲ್ಲಾಧಿಕಾರಿ ಕಚೇರಿ ಎದುರು ಎನ್ಎಸ್ಯುಐ ಸಂಘಟನೆಯು ಕಾಲೇಜು ವಿದ್ಯಾರ್ಥಿಗಳೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸಿದೆ. ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಎಂಬ ದೃಷ್ಟಿಯಿಂದ ಹಿಂದಿನ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ನೀಡುವ ಯೋಜನೆ ಜಾರಿಗೆ ತಂದಿತ್ತು. ಇದರಿಂದ ಬಡ ಮತ್ತು ಮಧ್ಯಮ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು.
ಹಿಂದಿನ ಸರ್ಕಾರ ಪದವಿ ತರಗತಿಯ ಮೂರು ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿತ್ತು. ಆದರೆ, ಈಗಿನ ಸರ್ಕಾರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡುತ್ತಿದೆ. ಇದು ವಿದ್ಯಾರ್ಥಿಗಳ ನಡುವೆಯೇ ತಾರತಮ್ಯ ಮಾಡಿದಂತೆ ಆಗುತ್ತಿದೆ. ಇದರಿಂದ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ನಿಂದ ವಂಚಿತರಾಗುತ್ತಿದ್ದಾರೆ.
ಇದರಿಂದ ರಾಜ್ಯ ಸರ್ಕಾರ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡಿ ವಿದ್ಯಾರ್ಥಿಗಳ ಕಲಿಕೆಗೆ ಸಹಾಯಕವಾಗಬೇಕು ಎಂದು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.