ಶಿವಮೊಗ್ಗ :ರಾಜ್ಯದಲ್ಲಿ ಕೊರೊನಾ 2ನೇ ಅಲೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳು ಸೋಮವಾರ ಕೆಲ ಕಠಿಣ ರೂಲ್ಸ್ಗಳನ್ನು ಜಾರಿಗೊಳಿಸಿದ್ದಾರೆ.
ಶಿವಮೊಗ್ಗ : ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು - Shivamogga
ನಗರದಲ್ಲೇ ಹೆಚ್ಚು ಜನ ದಟ್ಟಣೆ ಇರುವ ಸ್ಥಳವಾದ ಗಾಂಧಿ ಬಜಾರ್ನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದರು..
ಶಿವಮೊಗ್ಗ: ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು
ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿರುವ ಬೆನ್ನಲ್ಲೇ ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಸಂಜೆ ನಗರದ ಜನ ದಟ್ಟಣೆ ಇರುವ ಗಾಂಧಿ ಬಜಾರ್ನಲ್ಲಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಮೂಲಕ ಜಾಗೃತಿ ಮೂಡಿಸಿದರು. ಅಧಿಕಾರಿಗಳು ದಂಡ ವಿಧಿಸುತ್ತಿರುವುದನ್ನು ಕೆಲವರು ವಿರೋಧಿಸಿದರು.