ಶಿವಮೊಗ್ಗ: ಮಲೆನಾಡಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾಗೆ ಶಿವಮೊಗ್ಗದಲ್ಲಿ ಮೊದಲ ಬಲಿ: ಹೆಚ್ಚಿದ ಆತಂಕ - ಶಿವಮೊಗ್ಗ ವೃದ್ಧೆ ಸಾವು ನ್ಯೂಸ್
ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು ಇಂದು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
Shivakumar
ಆಸ್ಪತ್ರೆಗೆ ದಾಖಲಾದ ಮಹಿಳೆಗೆ ಕೋವಿಡ್ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಸದ್ಯ ಮೃತರ ಶವವನ್ನು ಚನ್ನಗಿರಿಗೆ ರವಾನೆ ಮಾಡಲಾಗಿದ್ದು, ವೃದ್ಧೆಯ ಜೊತೆ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡಲಾಗಿದೆ.
ಇನ್ನು ವೃದ್ಧೆ ಮೃತಪಟ್ಟಿರುವ ಕುರಿತು ರಾಜ್ಯ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.