ಶಿವಮೊಗ್ಗ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದಲ್ಲದೇ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ವೃದ್ಧರೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ಶಿವಮೊಗ್ಗದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 7ಕ್ಕೆ ಏರಿಕೆ - Shivmogga corona death news
ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ವೃದ್ಧರೊಬ್ಬರು ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
Shivmogga
ಶಿಕಾರಿಪುರ ತಾಲೂಕಿನ ಕವಾಸಪುರದ 76 ವರ್ಷದ ವೃದ್ಧರೊಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದು, ಇವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾಧಿಕಾರಿ ಖಚಿತ ಪಡಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದ್ದು, ವಯಸ್ಸಾದವರೇ ಹೆಚ್ಚು ಸಾವನ್ನಪ್ಪಿದ್ದಾರೆ.