ಶಿವಮೊಗ್ಗ :ಸಿಎಂ ಯಡಿಯೂರಪ್ಪನವರ ತವರು ಕ್ಷೇತ್ರ ಶಿಕಾರಿಪುರದ 65 ವರ್ಷದ ವೃದ್ಧರೊಬ್ಬರು ಜ್ವರ ಹಾಗೂ ಇತರೆ ಸಮಸ್ಯೆಯಿಂದ ಕಳೆದ ಎರಡು ದಿನಗಳ ಹಿಂದೆ ನಗರದ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಭಾನುವಾರ ಸಂಜೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಕೋವಿಡ್-19 ಮಾರ್ಗಸೂಚಿಯಂತೆ ಸ್ವಾಬ್ ಪರೀಕ್ಷೆ ನಡೆಸಿದಾಗ ಮೃತ ವೃದ್ಧನಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ. ಮೃತನಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಯ ಐಸಿಯು ವಾರ್ಡ್ನ ಸ್ಯಾನಿಟೈಸ್ ಮಾಡಲಾಗಿದೆ. ಚಿಕಿತ್ಸೆ ನೀಡಿದ ವೈದ್ಯರು ಹಾಗೂ ನರ್ಸ್ಗಳನ್ನು ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ. ವೃದ್ಧ ಸೇರಿ ಜಿಲ್ಲೆಯಲ್ಲಿ ಕೊರೊನಾಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ.