ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಸಿಎಎ, ಎನ್ಆರ್ಸಿ ಮತ್ತು ಒಂದೇ ಪಕ್ಷದ ಪರವಾಗಿರುವ ಇವಿಎಂ ವಿರುದ್ಧ ಪ್ರತಿಭಟನೆ ಹಾಗೂ ಪರಿವರ್ತನಾ ಸಭೆಯನ್ನು ಫೆಬ್ರವರಿ 1ರಂದು ಹಮ್ಮಿಕೊಳ್ಳಲಾಗಿದೆ ಎಂದು ಸ್ವರಾಜ್ ಇಂಡಿಯಾದ ಜಿಲ್ಲಾ ವಕ್ತಾರ ಕೆ.ಪಿ.ಶ್ರೀಪಾಲ್ ತಿಳಿಸಿದರು.
ಫೆ. 1ರಂದು ಶಿವಮೊಗ್ಗದಲ್ಲಿ ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆ - ಸ್ವರಾಜ್ ಇಂಡಿಯಾದ ಜಿಲ್ಲಾ ವಕ್ತಾರ ಕೆ.ಪಿ ಶ್ರೀಪಾಲ್
ಸಿಎಎ, ಎನ್ಆರ್ಸಿ ಜಾರಿ ಖಂಡಿಸಿ ಫೆಬ್ರವರಿ 1ರಂದು ಪ್ರತಿಭಟನೆ ಹಾಗೂ ಪರಿವರ್ತನಾ ಸಭೆಯನ್ನು ಬಹುಜನ ಕ್ರಾಂತಿ ಮೋರ್ಚಾ, ದಲಿತ ಸಂಘರ್ಷ ಸಮಿತಿ, ಸಿಟಿಜನ್ ಯುನೈಟೆಡ್ ಮೂಮೆಂಟ್ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವರಾಜ್ ಇಂಡಿಯಾದ ಜಿಲ್ಲಾ ವಕ್ತಾರ ಕೆ.ಪಿ.ಶ್ರೀಪಾಲ್ ತಿಳಿಸಿದರು.
![ಫೆ. 1ರಂದು ಶಿವಮೊಗ್ಗದಲ್ಲಿ ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆ Shivamogga](https://etvbharatimages.akamaized.net/etvbharat/prod-images/768-512-5905619-thumbnail-3x2-mng.jpg)
ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆ
ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆ
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಎ, ಎನ್ಆರ್ಸಿ ಜಾರಿ ಖಂಡಿಸಿ ಬಹುಜನ ಕ್ರಾಂತಿ ಮೋರ್ಚಾ, ದಲಿತ ಸಂಘರ್ಷ ಸಮಿತಿ, ಸಿಟಿಜನ್ ಯುನೈಟೆಡ್ ಮೂಮೆಂಟ್ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸಂದೇಶ ಮೋಟಾರ್ ಪಕ್ಕದ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬಹುಜನ ಕ್ರಾಂತಿ ಮೋರ್ಚಾದ ರಾಷ್ಟ್ರೀಯ ಸಂಯೋಜಕ ವಾಮನ್ ಮೆಶ್ರಾಮ್, ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ನ ವಕ್ತಾರ ವಮೋಲಾನ ಸಜ್ಜಾದ್ ನೋಮಾನಿ, ಮುಸ್ಲಿಂ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಹಮೀದ್ ಹಜಾರಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.