ಕರ್ನಾಟಕ

karnataka

ETV Bharat / state

ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಅಡಕೆ ಬೆಳೆ ಸೇರಿಸುವಂತೆ ಒತ್ತಾಯ - ಅಡಿಕೆ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೆಗ್ಡೆ

ರಾಜ್ಯದಲ್ಲಿ ನಾಲ್ಕೂವರೆ ಲಕ್ಷ ಹೆಕ್ಟೇರನಲ್ಲಿ ಅಡಕೆ ಬೆಳೆಯಲಾಗುತ್ತದೆ. ಹಾಗಾಗಿ ಅಡಕೆ ಬೆಳೆಗಾರರ ಹಿತ ಕಾಪಾಡಲು ಅಡಕೆ ಕಾರ್ಯಪಡೆಯನ್ನು ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ರಚಿಸಿ ಹತ್ತು ಕೋಟಿ ರೂ. ಅನುದಾನ ನೀಡಿದೆ. ಆದರೆ ಈಗ ಆ ಕಾರ್ಯಪಡೆಯೇ ಇಲ್ಲದಂತಾಗಿದೆ ಎಂದು ರಮೇಶ ಹೆಗ್ಡೆ ದೂರಿದರು.

one-district-insists-on-adding-
ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಅಡಕೆ ಬೆಳೆ

By

Published : Mar 6, 2021, 9:56 PM IST

ಶಿವಮೊಗ್ಗ:ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿಯಲ್ಲಿ ಅಡಕೆಯನ್ನು ಸೇರಿಸಬೇಕು ಎಂದು ಅಡಕೆ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ ಹೆಗ್ಡೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಅಡಕೆ ಬೆಳೆ

ಓದಿ: ರಾಜ್ಯದಲ್ಲಿಂದು 580 ಮಂದಿಗೆ ಕೊರೊನಾ ಸೋಂಕು ದೃಢ; ಐವರು ಬಲಿ

ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸುಮಾರು ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರಮುಖ ಬೆಳೆಯಾಗಿರುವ ಅಡಕೆಯನ್ನು ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿಯಲ್ಲಿ ಸೇರಿಸದಿರುವುದು ಅಡಕೆ ಬೆಳೆಗಾರರಲ್ಲಿ ಆತಂಕ ಸೃಷ್ಟಿ ಮಾಡಿದೆ. ಹಾಗಾಗಿ ಈ ಬಜೆಟ್​ನಲ್ಲಿ ಅಡಕೆಗೆ ಉತ್ತೇಜನ ನೀಡುವ ಸಲುವಾಗಿ ಹೆಚ್ಚಿನ ಅನುದಾನ ನೀಡಿ ಅಡಕೆ ಬೆಳೆಯುವ ಯಾವುದಾದರೂ ಒಂದು ಜಿಲ್ಲೆಗೆ ಒಂದು ಜಿಲ್ಲೆ ಒಂದು ಬೆಳೆ ಯೋಜನೆಯಡಿಯಲ್ಲಿ ಅಡಕೆಯನ್ನು ಸೇರಿಸುವ ಮೂಲಕ ಅಡಕೆಗೆ ಗೌರವ ನೀಡಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ನಾಲ್ಕೂವರೆ ಲಕ್ಷ ಹೆಕ್ಟೇರನಲ್ಲಿ ಅಡಕೆ ಬೆಳೆಯಲಾಗುತ್ತದೆ. ಹಾಗಾಗಿ ಅಡಕೆ ಬೆಳೆಗಾರರ ಹಿತ ಕಾಪಾಡಲು ಅಡಕೆ ಕಾರ್ಯಪಡೆಯನ್ನು ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ರಚಿಸಿ ಹತ್ತು ಕೋಟಿ ರೂ. ಅನುದಾನ ನೀಡಿದೆ. ಆದರೆ ಈಗ ಆ ಕಾರ್ಯಪಡೆಯೇ ಇಲ್ಲದಂತಾಗಿದೆ ಎಂದು ದೂರಿದರು.

ಅಡಕೆ ಬೆಳೆಗಾರರ ಹಿತ ಕಾಪಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಅಡಕೆ ಹಾನಿಕಾರಕ ಅಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಮನವರಿಕೆ ಮಾಡಿಕೊಟ್ಟಿಲ್ಲ. ಇವರ ಭರವಸೆಗಳು ಹುಸಿಯಾಗಿವೆ. ಈಗಲಾದರೂ ಯಾವುದಾದರೂ ಒಂದು ಜಿಲ್ಲೆಗೆ ಒಂದು ಬೆಳೆ ಒಂದು ಉತ್ಪನ್ನ ಯೋಜನೆಯಡಿಯಲ್ಲಿ ಅಡಕೆಯನ್ನು ಸೇರಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details