ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಸಾವು ಸಂಭವಿಸಿದೆ. ಬೊಮ್ಮನಕಟ್ಟೆಯ 55 ವರ್ಷದ ಮಹಿಳೆ ಬಲಿಯಾಗಿದ್ದಾರೆ.
ಸಿಎಂ ತವರಿನಲ್ಲಿ ಕೊರೊನಾ ಮರಣ ಮೃದಂಗ: ಸೋಂಕಿಗೆ ಮತ್ತೊಂದು ಬಲಿ, 15ಕ್ಕೇರಿದ ಸಾವಿನ ಸಂಖ್ಯೆ - Shivamogga corona latest news
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲೂ ಕೊರೊನಾ ರಣಕೇಕೆ ಹಾಕುತ್ತಿದೆ. ಮಹಾಮಾರಿ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿದೆ.
ಶಿವಮೊಗ್ಗ ಕೊರೊನಾ ಸಾವು
ಈ ಮಹಿಳೆ ಕಳೆದ 3 ದಿನಗಳ ಹಿಂದೆ ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಗುರುವಾರ ಇಬ್ಬರು ಸಾವನ್ನಪ್ಪಿದ್ದರು. ಕೊರೊನಾ ಮಹಾಮಾರಿ ಹೀಗೆ ರಣಕೇಕೆ ಹಾಕುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆ ಸಹ ಹೆಚ್ಚಾಗುತ್ತಿರುವುದರಿಂದ ಮಲೆನಾಡಿನ ಜನರು ಬೆಚ್ಚಿಬಿದ್ದಿದ್ದಾರೆ.