ಶಿವಮೊಗ್ಗ:ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಎಲ್ಲರೂ ಅಲ್ಲ, ಒಬ್ಬರು ಮಾತನಾಡುತ್ತಿದ್ದಾರೆ. ಅವರನ್ನು ಕರೆಯಿಸಿ ಮಾತನಾಡಲಾಗಿದೆ. ಅವರು ಮುಂದೆ ಸುಧಾರಿಸುವ ಭರವಸೆ ಇದೆ ಎಂದು ಪರೋಕ್ಷವಾಗಿ ಯತ್ನಾಳ್ ಹೆಸರು ಸೂಚಿಸದೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ನಾಳೆ ಮತ್ತು ನಾಡಿದ್ದು ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಸಲಾಗುತ್ತದೆ. ಈ ಸಭೆಗೆ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸುತ್ತಿದ್ದಾರೆ. ನಾಳೆಯ ಕಾರ್ಯಕ್ರಮ ಹರ್ಷಾ ದ ಫರ್ನಾದಲ್ಲಿ ನಡೆಯುತ್ತದೆ. ರಾಜ್ಯ ಬಿಜೆಪಿ ವಿಶೇಷ ಸಭೆ ಎರಡು ದಿನ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಮೊದಲ ಬಾರಿ ರಾಜ್ಯದಲ್ಲಿ ಗ್ರಾಮೀಣ ಪ್ರದೇಶದ ಜನ ಕಾಂಗ್ರೆಸ್ ಮತ್ತು ಜೆಡಿಎಸ್ನ್ನು ಪಕ್ಕಕ್ಕೆ ಸರಿಸಿ ಬಿಜೆಪಿಗೆ ಆರ್ಶೀವಾದ ಮಾಡಿದ್ದಾರೆ ಎಂದರು.
ಭಾನುವಾರ ಬೆಳಗ್ಗೆ 9 ಗಂಟೆಗೆ ಪ್ರೇರಣ ಸಭಾಗಂಣದಲ್ಲಿ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತಂದ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸನ್ಮಾನ ಮಾಡಲಾಗುತ್ತದೆ. ಇದು ಮಾಜಿ ಪರಿಷತ್ ಸಭಾಪತಿ ಡಿ.ಎಸ್. ಶಂಕರಮೂರ್ತಿರವರ ಅಧ್ಯಕ್ಷತೆಯಲ್ಲಿ ನಡೆಯುತ್ತದೆ. ಈಗಾಗಲೇ ಎಲ್ಲಾ ತಯಾರಿ ನಡೆಸಲಾಗಿದೆ ಎಂದರು.