ಶಿವಮೊಗ್ಗ:ರಾಜ್ಯ ಸರ್ಕಾರದ ಆದೇಶದಂತೆ ನಾಳೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಮಾಡಲಾಗುವುದು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ನಾಳೆ ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ: ಶಿವಮೊಗ್ಗ ಡಿಸಿ - ನಾಳೆಯ ಲಾಕ್ಡೌನ್
ರಾಜ್ಯ ಸರ್ಕಾರದ ಆದೇಶದಂತೆ ನಾಳೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಮಾಡಲಾಗುವುದು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಡಿಸಿ ಶಿವಕುಮಾರ್
ಈ ಕುರಿತು ಮಾತನಾಡಿದ ಅವರು, ಇಂದು ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೂ ಲಾಕ್ಡೌನ್ ಇರಲಿದೆ. ಇದಕ್ಕೆ ಜಿಲ್ಲೆಯ ಜನತೆ ಸಹಕರಿಸಬೇಕು. ಮೊದಲ ಬಾರಿಯ ಲಾಕ್ಡೌನ್ನಂತೆ ನಾಳೆ ಸಂಪೂರ್ಣ ಲಾಕ್ಡೌನ್ ನಡೆಸಲಾಗುವುದು. ತಮ್ಮ ಅವಶ್ಯಕ ವಸ್ತುಗಳ ಖರೀದಿಗೆ ಮಾತ್ರ ಮನೆಯಿಂದ ಹೊರ ಬರಬೇಕು ಎಂದು ವಿನಂತಿ ಮಾಡಿಕೊಂಡಿದ್ದಾರೆ.
ನಿನ್ನೆ ಜಿಲ್ಲೆಯಲ್ಲಿ ಕಂಡು ಬಂದ ಎರಡು ಪಾಸಿಟಿವ್ ಪ್ರಕರಣಗಳು ಸೆಕಂಡರಿ ಸಂಪರ್ಕದಿಂದ ಬಂದಿವೆ. ಇಬ್ಬರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದರು.