ಶಿವಮೊಗ್ಗ: ಅನಾರೋಗ್ಯದಿಂದ ಬೇಸತ್ತು ಮೂಳೆ ತಜ್ಞರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಡಾ. ಲೋಲಿತ್ (40) ಆತ್ಮಹತ್ಯೆಗೆ ಶರಣಾಗಿರುವ ವೈದ್ಯ.
ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ, ಡಾ. ಲೋಲಿತ್ ಹೃದಯಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ತಮ್ಮ ಮನೆಯ ರೂಂನಲ್ಲಿ ನೇಣಿಗೆ ಶರಣಾಗಿದ್ದಾರೆ. ಬೆಳಗ್ಗೆ ಮನೆಯವರು ನೋಡಿದಾಗ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.