ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ 'ಪಾಪು ಗಾಂಧಿ' ರಂಗ ಪಯಣಕ್ಕೆ ಚಾಲನೆ.... - ಹಿರಿಯ ಸಾಹಿತಿ ಬೊಳುವಾರು ಮಹಮ್ಮದ್ ಕುಂಞ

ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಚಿಂತನೆಯ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.

ಶಿವಮೊಗ್ಗದಲ್ಲಿ 'ಪಾಪು ಗಾಂಧಿ' ರಂಗ ಪಯಣ
ಶಿವಮೊಗ್ಗದಲ್ಲಿ 'ಪಾಪು ಗಾಂಧಿ' ರಂಗ ಪಯಣ

By

Published : Dec 2, 2019, 7:03 AM IST

ಶಿವಮೊಗ್ಗ:ಮಹಾತ್ಮ ಗಾಂಧೀಜಿ ಅವರ ಬದುಕು ಮತ್ತು ಚಿಂತನೆಯ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ನಗರದ ರಂಗಾಯಣದಲ್ಲಿ 'ಪಾಪು ಗಾಂಧಿ' ರಂಗ ಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಹಿಂಸೆಯ ಮೂಲಕ ಗಾಂಧೀಜಿಯವರು ದೇಶವನ್ನು ಕಟ್ಟಿದರು ಎಂದರು.

ದೈಹಿಕವಾಗಿ ದುರ್ಬಲರಾಗಿದ್ದ ಗಾಂಧಿ ತಮ್ಮ ಅಹಿಂಸೆ, ಸತ್ಯಾಗ್ರಹ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಬಾಲ್ಯದಲ್ಲಿ ಸಾಮಾನ್ಯರಲ್ಲಿ ಒಬ್ಬರಾಗಿದ್ದ ಗಾಂಧೀಜಿಯವರು ಮಹಾತ್ಮರಾಗಿ ಬೆಳೆದು ನಿಂತರು ಎಂದರು. ತಮ್ಮ ಬದುಕಿನ ಮುಖಾಂತರ ದೇಶಕ್ಕೆ ಮಾರ್ಗದರ್ಶನ ನೀಡಿದ ಗಾಂಧೀಜಿಯವವರ ಬಗ್ಗೆ ನಿರಂತರವಾಗಿ ಅರಿವು ಮೂಡಿಸುವ ಕಾರ್ಯಗಳು ನಡೆಯಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೇಶವ ಶರ್ಮಾ ಮಾತನಾಡಿ, ಗಾಂಧೀಜಿಯವರ ವಿಚಾರಧಾರೆಗಳನ್ನು ಮನನ ಮಾಡುವ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.

ರಂಗ ಸಮಾಜದ ಸದಸ್ಯ ಆರ್.ಎಸ್. ಹಾಲಸ್ವಾಮಿ, ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್. ಮಂಜುನಾಥ್, ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಹೆಚ್.ವಿ. ಮಂಜುನಾಥ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಉಮೇಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇನ್ನು ಹಿರಿಯ ಸಾಹಿತಿ ಬೊಳುವಾರು ಮಹಮ್ಮದ್ ಕುಂಞ ಅವರ ಕೃತಿ ಆಧಾರಿತ ನಾಟಕ 'ಪಾಪು ಗಾಂಧಿ', ಡಿಸೆಂಬರ್ 7ರವರೆಗೆ ಶಿವಮೊಗ್ಗ ರಂಗಾಯಣದಲ್ಲಿ ಪ್ರದರ್ಶನಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ಹಾಗೂ ಮಧ್ಯಾಹ್ನ 2.30ಕ್ಕೆ ಉಚಿತ ಪ್ರದರ್ಶನವಿದ್ದು, ಜನವರಿ 4ರವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳ ಶಾಲಾ ಕಾಲೇಜುಗಳಲ್ಲಿ ನಾಟಕ ಪ್ರದರ್ಶನ ನಡೆಯಲಿದೆ.

ABOUT THE AUTHOR

...view details