ಕರ್ನಾಟಕ

karnataka

ETV Bharat / state

ಸರಿಯಾದ ಸಮಯಕ್ಕೆ ಬಾರದ ಬಸ್​​ಗಳು: ಶಿವಮೊಗ್ಗದಲ್ಲಿ ಪ್ರಯಾಣಿಕರ ಪರದಾಟ - ಸರಿಯಾದ ಸಮಯಕ್ಕೆ ಬಾರದ ಬಸ್

ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ಯಾರೂ ಸಹ ಅನಗತ್ಯವಾಗಿ ಓಡಾಡಬೇಡಿ ಎಂದರೂ ಸಹ ಜನರು ಮಾತ್ರ ಬಸ್ ನಿಲ್ದಾಣಕ್ಕೆ ಬಂದು ಸರಿಯಾದ ಸಮಯಕ್ಕೆ ಬಸ್ ಸಂಚಾರ ಇಲ್ಲದೆ ಪರದಾಡುತ್ತಿದ್ದರು.

Shimoga
Shimoga

By

Published : Apr 24, 2021, 3:37 PM IST

ಶಿವಮೊಗ್ಗ: ಸರಿಯಾದ ಸಮಯಕ್ಕೆ ಕೆಎಸ್ಆರ್​ಟಿಸಿ ಬಸ್​​ಗಳು ಬಾರದ ಕಾರಣ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ.

ನಿನ್ನೆ ರಾತ್ರಿ ಒಂಭತ್ತು ಗಂಟೆಯಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆದರೆ ಕೆಎಸ್ಆರ್​ಟಿಸಿ ಬಸ್ ಸಂಚಾರಕ್ಕೆ ಸರ್ಕಾರ ಅವಕಾಶ ನೀಡಿದೆ. ಹಾಗಾಗಿ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಸರಿಯಾದ ಸಮಯಕ್ಕೆ ಬಸ್ ಸಂಚಾರ ಇಲ್ಲದೇ ಪರದಾಡುವಂತಾಗಿದೆ.

ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ಯಾರೂ ಸಹ ಅನಗತ್ಯವಾಗಿ ಓಡಾಡಬೇಡಿ ಎಂದರು ಸಹ ಜನರು ಮಾತ್ರ ಬಸ್ ನಿಲ್ದಾಣಕ್ಕೆ ಬಂದು ಸರಿಯಾದ ಸಮಯಕ್ಕೆ ಬಸ್ ಸಂಚಾರ ಇಲ್ಲದೇ ಪರದಾಡುತ್ತಿದ್ದರು.

ಬಸ್ ನಿಲ್ದಾಣದಿಂದ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ ನಿಗದಿತ ಸಮಯಕ್ಕೆ ಸರಿಯಾಗಿ ಬಸ್​​ಗಳ ಸೇವೆ ಇಲ್ಲದೆ ಜನರು ದೂರದೂರಿಗೆ ಹೋಗಲು ಪರದಾಡಿದರು.

ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ ಮೇಲೆ ಬಸ್ ಸಂಚಾರಕ್ಕೆ ಅವಕಾಶ ಕೊಡಬಾರದಿತ್ತು. ಬಸ್ ಸಂಚಾರ ಇದೆ ಎನ್ನುವ ಕಾರಣಕ್ಕೆ ನಾವು ಬಂದಿದ್ದೇವೆ. ಬಸ್ ಸಂಚಾರವೇ ಇಲ್ಲದೇ ಹೊಗಿದ್ದರೆ ನಾವು ಪರದಾಡುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details