ಕರ್ನಾಟಕ

karnataka

ETV Bharat / state

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಆಗ್ರಹ - ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿರುವ ಹಾಗೂ ವಿಮಾನ ನಿಲ್ದಾಣ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದಲು ಸಾಕಷ್ಟು ಅನುದಾನ ನೀಡಿ ಶ್ರಮಿಸುತ್ತಿರುವ ಬಿ.ಎಸ್ ಯಡಿಯೂರಪ್ಪನವರ ಹೆಸರನ್ನೆ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್​ವೈ ಹೆಸರಿಡುವಂತೆ ಆಗ್ರಹ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್​ವೈ ಹೆಸರಿಡುವಂತೆ ಆಗ್ರಹ

By

Published : Jul 13, 2021, 7:27 PM IST

ಶಿವಮೊಗ್ಗ: ಜಿಲ್ಲೆಯ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಹೆಸರಿಡಬೇಕು ಎಂದು ಕರುನಾಡು ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಪಿ ಶಿವಮೂರ್ತಿ ಆಗ್ರಹಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್​ವೈ ಹೆಸರಿಡುವಂತೆ ಆಗ್ರಹ

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿರುವ ಹಾಗೂ ವಿಮಾನ ನಿಲ್ದಾಣ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದಲು ಸಾಕಷ್ಟು ಅನುದಾನ ನೀಡಿ ಶ್ರಮಿಸುತ್ತಿರುವ ಬಿ.ಎಸ್ ಯಡಿಯೂರಪ್ಪನವರ ಹೆಸರನ್ನೆ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಕೊರೊನಾ ಸೋಂಕಿನಿಂದ ಮೃತರಾದ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ ಒಂದು ಲಕ್ಷ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ABOUT THE AUTHOR

...view details