ಶಿವಮೊಗ್ಗ: ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆಯಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಕಾರ್ಯಕರ್ತರ ಸಮಸ್ಯೆ ಆಲಿಸಲು ಜನಸ್ಪಂದನ ಪೂರಕ: ಸಂಸದ ಬಿ.ವೈ. ರಾಘವೇಂದ್ರ
ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಲು ಹೆಚ್ಚಿನ ಸಮಯ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮ ಪೂರಕವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ ರಾಘವೇಂದ್ರ
ಕಾರ್ಯಕ್ರಮದಲ್ಲಿ ಶಾಸಕ ಹರತಾಳು ಹಾಲಪ್ಪ, ಗ್ರಾಮಾಂತರ ಶಾಸಕ ಅಶೋಕ ನಾಯ್ಕ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಭಾನು ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.