ಕರ್ನಾಟಕ

karnataka

ETV Bharat / state

ಪೊಲೀಸ್ ಇಲಾಖೆ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಿದೆ: ಡಿಸಿ ಶಿವಕುಮಾರ್ - ಶಿವಮೊಗ್ಗ

ಕಾನೂನು- ಸುವ್ಯವಸ್ಥೆ ಜಾರಿಯ ಮೂಲಕ ಪೊಲೀಸ್ ಇಲಾಖೆ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

police martyr's day celebrate
ಶಿವಮೊಗ್ಗದಲ್ಲಿ ಪೊಲೀಸರ ಹುತಾತ್ಮ ದಿನಾಚರಣೆ

By

Published : Oct 21, 2020, 3:47 PM IST

ಶಿವಮೊಗ್ಗ: ಜಿಲ್ಲಾ ಕವಾಯತು ಮೈದಾನದಲ್ಲಿ ಪೊಲೀಸರ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಪೊಲೀಸ್ ಇಲಾಖೆ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಿದೆ: ಡಿಸಿ ಶಿವಕುಮಾರ್

ಈ ವೇಳೆ ಮಾತನಾಡಿದ ಡಿಸಿ ಕೆ.ಬಿ.ಶಿವಕುಮಾರ್, ಕರ್ತವ್ಯದಲ್ಲಿದ್ದ ಪೊಲೀಸರು ಸಮಾಜಘಾತಕ ಶಕ್ತಿಯ ವಿರುದ್ದ ಹೋರಾಟ ನಡೆಸುವಾಗ ಹುತಾತ್ಮರಾದವರನ್ನು ನೆನಪಿಸಿಕೊಳ್ಳುವ ಸಲುವಾಗಿ ಅ.21 ರಂದು ಪೊಲೀಸ್ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತದೆ. ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪ್ರಮುಖ ಪಾತ್ರವಹಿಸುತ್ತದೆ. ಕರ್ತವ್ಯಕ್ಕಾಗಿ ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಸಹ ಪ್ರತಿ‌ದಿನ ಕರ್ತವ್ಯಕ್ಕೆ ಹಾಜರಾಗುತ್ತಾರೆ. ಇದು ಅವರ ಕರ್ತವ್ಯ ಪ್ರಜ್ಞೆಯನ್ನು ತೋರಿಸುತ್ತದೆ. ಪೊಲೀಸರು ಬಡವರು ಹಾಗೂ ನಿರ್ಗತಿಕರಿಗೆ ಸಹಾಯ ಮಾಡಿ ಎಂದು ವಿನಂತಿಸಿ ಕೊಂಡರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್​​ಪಿ ಶಾಂತರಾಜು ಸೇರಿದಂತೆ ಇಲಾಖೆಯ ವಿವಿಧ ಸಿಬ್ಬಂದಿಗಳು ಹುತಾತ್ಮ ಸ್ಮಾರಕಕ್ಕೆ ಹೂಗುಚ್ಚ ಇಟ್ಟು ಗೌರವ ವಂದನೆ ಸಲ್ಲಿಸಿದರು. ನಂತರ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಕುಶಲತೋಪು ಹಾರಿಸಿ ಗೌರವ ಸಲ್ಲಿಸಿದರು.

ABOUT THE AUTHOR

...view details