ಶಿವಮೊಗ್ಗ: ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಶೋಭಾಳನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಇಂದು ಹಾಜರು ಪಡಿಸಲಾಗಿದೆ. 2012 ರಲ್ಲಿ ಬರ್ಕಣ ಫಾಲ್ಸ್ ಬಳಿ ನಡೆದಿದ್ದ ಫೈರಿಂಗ್ನಲ್ಲಿ ಶೋಭಾ ಭಾಗಿಯಾಗಿದ್ದರು ಎಂದು ದೂರು ದಾಖಲಿಸಲಾಗಿತ್ತು.
ನಕ್ಸಲ್ ಶೋಭಾಳನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು - Naxal Shobha
2012 ರಲ್ಲಿ ನಡೆದ ಬರ್ಕಣ ಫಾಲ್ಸ್ ಬಳಿಯ ಫೈರಿಂಗ್ನಲ್ಲಿ ಶೋಭಾ ಭಾಗಿಯಾಗಿದ್ದಾಳೆ ಎಂಬ ಆರೋಪದ ಮೇಲೆ ಆಕೆಯನ್ನು ಬಂಧಿಸಲಾಗಿತ್ತು. ಇಂದು ಆಕೆಯನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಇಂದು ಹಾಜರು ಪಡಿಸಲಾಗಿದೆ.
ನಕ್ಸಲ್ ಶೋಭಾ
ಫೈರಿಂಗ್ ಪ್ರಕರಣದ ನಂತರ ಶೋಭಾ ತಲೆ ಮರೆಸಿಕೊಂಡಿದ್ದರು. ಕಳೆದ ಮಾರ್ಚ್ನಲ್ಲಿ ಶೋಭಾರನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿತ್ತು. ಶೋಭಾ 11 ನಕ್ಸಲ್ ಚಟುವಟಿಕೆಯಲ್ಲಿ ತೂಡಗಿಸಿಕೊಂಡಿದ್ದರು ಎಂಬ ಆರೋಪವಿದೆ. ಇವರ ವಿರುದ್ದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ವಿವಿಧ ಪೊಲೀಸ್ ಠಾಣೆಯಲ್ಲಿ 8 ಕ್ಕೂ ಅಧಿಕ ಪ್ರಕರಣಗಳಿವೆ.
ಶೋಭಾ ಮೂಲತಃ ಹೊಸನಗರ ತಾಲೂಕಿನ ಮೇಲುಸಂಕದವರು. ಸದ್ಯ ಶೋಭಾರನ್ನು ತಮಿಳುನಾಡಿನ ಕೊಯಂಬತ್ತೂರು ಜೈಲ್ನಲ್ಲಿ ಇಡಲಾಗಿದೆ. ಈಕೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರಿಂದ, ಪೊಲೀಸ್ ಹಾಗೂ ಎನ್ಎಫ್ ತಂಡ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದೆ.