ಶಿವಮೊಗ್ಗ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿ ಮಾಡಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗ್ತಿದೆ.
ಕರ್ಫ್ಯೂ ನಿಯಮ ಉಲ್ಲಂಘಿಸಿದ 243 ವಾಹನ ಜಪ್ತಿ: 95 ಸಾವಿರ ದಂಡ ವಸೂಲಿ - ಕರ್ಫ್ಯೂ ನಿಯಮ ಉಲ್ಲಂಘಿಸಿದ 243 ವಾಹನ ಜಪ್ತಿ
ಕಠಿಣ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಶಿವಮೊಗ್ಗದಲ್ಲಿ ಒಟ್ಟು 243 ವಾಹನಗಳನ್ನು ಸೀಜ್ ಮಾಡಲಾಗಿದ್ದು, ಸುಮಾರು 95,000 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ನಿಯಮವನ್ನು ಉಲ್ಲಂಘಿಸಿದ ಅಂಗಡಿಯ ಮಾಲೀಕರ ವಿರುದ್ಧ THE KARNATAKA EPIDEMIC DISEASES ACT, 2020 ಕಾಯ್ದೆಯ ಅಡಿಯಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ - 01, ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ - 01 ಮತ್ತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ -01 ಪ್ರಕರಣ ಸೇರಿ ಒಟ್ಟು ಮೂರು ಕೇಸ್ಗಳನ್ನು ದಾಖಲಿಸಲಾಗಿದೆ.
ಲಾಕ್ಡೌನ್ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ 243 ವಾಹನಗಳನ್ನು (228 ದ್ವಿಚಕ್ರ ವಾಹನ, ಮತ್ತು 04 ಆಟೋ ಹಾಗೂ 11 ಕಾರು) ವಶಪಡಿಸಿಕೊಳ್ಳಲಾಗಿದೆ. ಒಟ್ಟು 212 ಪ್ರಕರಣಗಳನ್ನು ದಾಖಲಿಸಿ ರೂ. 95,000 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.