ಶಿವಮೊಗ್ಗ:ಗುತ್ತಿಗೆದಾರ ಸಂತೋಪ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪ ಎದುರಿಸುತ್ತಿರುವ ಕೆ.ಎಸ್.ಈಶ್ವರಪ್ಪ ಈಗಾಗಲೇ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮಲೇಶ್ವರ ನಗರದಲ್ಲಿರುವ ಸಚಿವರ ಮನೆಗೆ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ.
ಶಿವಮೊಗ್ಗ: ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಪೊಲೀಸ್ ಭದ್ರತೆ - Police tight security given to the Minister K.S. Ishwarappa's home in shimoga
ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ಈಶ್ವರಪ್ಪ ಮನೆಗೆ ಪೊಲೀಸ್ ಬಿಗಿ ಬಂದೋಬಸ್ತ್
ಈಶ್ವರಪ್ಪ ಮನೆಗೆ ಹೋಗುವ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿ, ಸಂಚಾರಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ. ಮೂವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ.