ಶಿವಮೊಗ್ಗ:ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ನಿರ್ಧಾರವನ್ನು ಖಂಡಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಪೋಸ್ಟ್ ಕಾರ್ಡ್ ಚಳವಳಿ ಹಮ್ಮಿಕೊಳ್ಳುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿತು.
ಶಿವಮೊಗ್ಗ: ಶರಾವತಿ ಉಳಿವಿಗಾಗಿ ಪೋಸ್ಟ್ ಕಾರ್ಡ್ ಚಳವಳಿ - undefined
ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ನಿರ್ಧಾರವನ್ನು ಖಂಡಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಪೋಸ್ಟ್ ಕಾರ್ಡ್ ಚಳವಳಿ ಹಮ್ಮಿಕೊಳ್ಳುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿತು.
ಲಿಂಗನಮಕ್ಕಿ ಜಲಾಶಯದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಹುನ್ನಾರ ನಡೆಸುತ್ತಿರುವುದು ಸಂಪೂರ್ಣ ಅವೈಜ್ಞಾನಿಕ ಎಂದು ಪ್ರತಿಭಟನಾಕಾರರು ಆರೋಪಿಸಿ ಮುಖ್ಯಮಂತ್ರಿಗಳಿಗೆ ಪೋಸ್ಟ್ ಕಾರ್ಡ್ ಬರೆಯಲಾಯಿತು. ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಅಲ್ಲಿಯ ಕೆರೆಗಳ ಅಭಿವೃದ್ಧಿ ಹಾಗೂ ಮಳೆಕೊಯ್ಲನ್ನು ಕಡ್ಡಾಯವಾಗಿ ಜಾರಿಗೊಳಿಸಿದರೆ ನೀರಿನ ಸಮಸ್ಯೆ ಬಗೆಹರಿಯುವುದೆಂಬ ಸಾಮಾನ್ಯ ಪ್ರಜ್ಞೆ ಸರ್ಕಾರಕ್ಕೆ ಇರಬೇಕಾಗುತ್ತದೆ. ಇಡೀ ರಾಜ್ಯಕ್ಕೆ ಬೆಳಕು ನೀಡುತ್ತಿರುವ ಶರಾವತಿ ನದಿಯನ್ನು ತಾವು ಬತ್ತಿಸಲು ಹೊರಟರೆ ಸಂಪೂರ್ಣ ರಾಜ್ಯ ಕತ್ತಲಲ್ಲಿ ಮುಳುಗುವುದು ಮಾತ್ರವಲ್ಲ ನೀರಿನ ಹಾಹಾಕಾರದಿಂದ ಮಲೆನಾಡು ಸರ್ವನಾಶ ಖಂಡಿತ. ಹಾಗಾಗಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ತೆರಿಗೆ ಹಣವನ್ನು ದುಂದುವೆಚ್ಚ ಮಾಡದೆ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.