ಕರ್ನಾಟಕ

karnataka

ETV Bharat / state

ಇಟಿ ಮತ್ತು ಪಿಎಸ್‌ಟಿ ಪರೀಕ್ಷೆ ಮುಂದೂಡಿಕೆ; ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು - ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು

ಸಿವಿಲ್ ಪೊಲೀಸ್​ ಕಾನ್ಸ್‌ಟೇಬಲ್ ಹುದ್ದೆಗಳ ಇಟಿ ಮತ್ತು ಪಿಎಸ್‌ಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

shivmogga
ಕೆ.ಎಂ.ಶಾಂತರಾಜು

By

Published : Nov 9, 2020, 10:51 PM IST

ಶಿವಮೊಗ್ಗ:ನಗರದಲ್ಲಿ ನಡೆಸಲು ಉದ್ದೇಶಿಸಿದ್ದ ಸಿವಿಲ್ ಪೊಲೀಸ್​ ಕಾನ್ಸ್‌ಟೇಬಲ್ ಹುದ್ದೆಗಳ ಇಟಿ ಮತ್ತು ಪಿಎಸ್‌ಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಟಿ ಮತ್ತು ಪಿಎಸ್‌ಟಿ ಪರೀಕ್ಷೆ ಮುಂದೂಡಿಕೆ

250 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ, ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನವೆಂಬರ್ 11 ರಂದು ಇಟಿ ಮತ್ತು ಪಿಎಸ್‌ಟಿ ಪರೀಕ್ಷೆ ನಿಗದಿಯಾಗಿತ್ತು. ಆದರೆ ಆಡಳಿತಾತ್ಮಕ ಕಾರಣಗಳಿಂದ ಪರೀಕ್ಷೆಯನ್ನು ಮುಂದೂಡುವಂತೆ ನೇಮಕಾತಿ ವಿಭಾಗದ ಎಡಿಜಿಪಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details