ಕರ್ನಾಟಕ

karnataka

ETV Bharat / state

ಕೃಷಿ ಸಚಿವರ ಸಭೆಯಲ್ಲಿ ಕೈಕೊಟ್ಟ ವಿದ್ಯುತ್: ಕತ್ತಲೆಯಲ್ಲೇ ಸಭೆ ಮುಂದುವರಿಕೆ - ಕೃಷಿ ಸಚಿವ ಬಿ.ಸಿ.ಪಾಟೀಲ್​ ಶಿವಮೊಗ್ಗ ಜಿಲ್ಲಾ ಪ್ರವಾಸ

ಕೃಷಿ ಸಚಿವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ​ ಶಿವಮೊಗ್ಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ತಯಾರಿ ಕುರಿತು ಸಭೆ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಕೈ ಕೊಟ್ಟಿದೆ.

Power outage due to technical in meeting
ಕೃಷಿ ಸಚಿವರ ಸಭೆಗೆ ಕೈ ಕೊಟ್ಟ ವಿದ್ಯುತ್

By

Published : Jun 6, 2021, 1:11 PM IST

ಶಿವಮೊಗ್ಗ:ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ತಯಾರಿ ಕುರಿತು ನಡೆದ ಸಭೆಯಲ್ಲಿ ತಾಂತ್ರಿಕ ಕಾರಣದಿಂದ ವಿದ್ಯುತ್​ ಕಡಿತಗೊಂಡ ಪರಿಣಾಮ ಕತ್ತಲಲ್ಲೇ ಸಭೆ ನಡೆದಿದೆ.

ಕೃಷಿ ಸಚಿವರ ಸಭೆಗೆ ಕೈ ಕೊಟ್ಟ ವಿದ್ಯುತ್

ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು​ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ತಯಾರಿ ಕುರಿತು ಸಭೆ ನಡೆಸಲು ಅವರು ಆಗಮಿಸಿದ್ದರು. ಈ ಸಭೆ ನಡೆಯುತ್ತಿದ್ದಂತಯೇ ವಿದ್ಯುತ್ ಕೈ ಕೊಟ್ಟಿದೆ. ಜಿಲ್ಲಾಧಿಕಾರಿಗಳ ಸಭಾಂಗಣಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಸುಮಾರು 10 ನಿಮಿಷಗಳ ಕಾಲ ಸಮಸ್ಯೆ ಪರಿಹರಿಸಲು ಪ್ರಯತ್ನ ಮಾಡಿದರೂ ಸಾಧ್ಯವಾಗದ ಕಾರಣ ಸಭೆಯನ್ನು ಕತ್ತಲೆಯಲ್ಲೇ ಮುಂದುವರೆಸಿದ್ದಾರೆ.

ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಕುಮಾರ ಬಂಗಾರಪ್ಪ, ಅಶೋಕ ನಾಯ್ಕ, ಎಂಎಲ್​​ಸಿಗಳಾದ ಆಯನೂರು ಮಂಜುನಾಥ್, ರುದ್ರೇಗೌಡ, ಆರ್.ಪ್ರಸನ್ನ ಕುಮಾರ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ABOUT THE AUTHOR

...view details