ಕರ್ನಾಟಕ

karnataka

ETV Bharat / state

ಶಿವಮೊಗ್ಗ; ಸಾಲ ಮರುಪಾವತಿಗೆ ಕಾಲಾವಕಾಶ ಕೋರಿ ಜಿಲ್ಲಾಧಿಕಾರಿಗೆ ಮನವಿ - prajaseva samithi

ಫೈನಾನ್ಸ್ ಹಾಗೂ ಸಂಘ ಸಂಸ್ಥೆಗಳಲ್ಲಿ ಪಡೆದಿರುವ ಸಾಲಕ್ಕೆ ಮಾರ್ಚ್ ವರೆಗೂ ಬಡ್ಡಿ ಮರುಪಾವತಿಸಿದ್ದೇವೆ. ಆದರೆ ಲಾಕ್​ಡೌನ್​​ ಜಾರಿಯ ಪರಿಣಾಮವಾಗಿ ದುಡಿಮೆ ಇಲ್ಲದೇ ಸಾಲ ಮತ್ತು ಬಡ್ಡಿ ಮರುಪಾವತಿ ಮಾಡಲು ಸಾಧ್ಯವಾಗಿಲ್ಲ ಎಂದು ಕರ್ನಾಟಕ ಮಾನವ ಸಂರಕ್ಷಣೆ ಹಾಗೂ ಪ್ರಜಾ ಸೇವಾ ಸಮಿತಿ ಜಿಲ್ಲಾಧ್ಯಕ್ಷ ವಿ. ಅಶೋಕ್ ಕುಮಾರ್ ತಿಳಿಸಿದರು.

prajaseva samithi appeal to dc in shimoga
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರಜಾ ಸೇವಾ ಸಮಿತಿ

By

Published : Jun 17, 2020, 10:41 PM IST

ಶಿವಮೊಗ್ಗ: ಸಂಘ ಸಂಸ್ಥೆಗಳಲ್ಲಿ ಪಡೆದಿರುವ ಸಾಲ ಮರುಪಾವತಿಸಲು ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಮಾನವ ಸಂರಕ್ಷಣೆ ಹಾಗೂ ಪ್ರಜಾ ಸೇವಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಗರದಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ವಿ ಅಶೋಕ್ ಕುಮಾರ್, ಫೈನಾನ್ಸ್ ಹಾಗೂ ಸಂಘ ಸಂಸ್ಥೆಗಳಲ್ಲಿ ಪಡೆದಿರುವ ಸಾಲಕ್ಕೆ ಮಾರ್ಚ್ ವರೆಗೂ ಬಡ್ಡಿ ಮರುಪಾವತಿಸಿದ್ದೇವೆ. ಆದರೆ ಲಾಕ್​ಡೌನ್​​ ಜಾರಿಯ ಪರಿಣಾಮವಾಗಿ ದುಡಿಮೆ ಇಲ್ಲದೇ ಸಾಲ ಮತ್ತು ಬಡ್ಡಿ ಮರುಪಾವತಿ ಮಾಡಲು ಸಾಧ್ಯವಾಗಿಲ್ಲ ಎಂದರು.

ವಿ ಅಶೋಕ್ ಕುಮಾರ್

ಅನೇಕ ಸಂಘ ಸಂಸ್ಥೆಗಳು, ಫೈನಾನ್ಸ್​ಗಳು ಸಾಲ ಮರುಪಾವತಿಸುವಂತೆ ಒತ್ತಡ ಹೇರುತ್ತಿವೆ. ಹಾಗಾಗಿ ಸಾಲ ಮತ್ತು ಬಡ್ಡಿ ಮರುಪಾವತಿಗೆ ಇನ್ನೂ ಮೂರು ತಿಂಗಳ ಕಾಲಾವಕಾಶ ನೀಡುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details