ಕರ್ನಾಟಕ

karnataka

ETV Bharat / state

ಅಂಗನವಾಡಿ ಕೇಂದ್ರದಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು: ಎಂ ಜಯಲಕ್ಷ್ಮಿ - ಜಿಲ್ಲಾ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ ಜಯಲಕ್ಷ್ಮಿ

ಅಂಗನವಾಡಿಗಳು ಮುಚ್ಚಿದರೆ ಇದನ್ನೆ ನೆಚ್ಚಿಕೊಂಡು ಬದುಕುತ್ತಿರುವ ಸಾವಿರಾರು ಕುಟುಂಬಗಳು ಬೀದಿಗೆ ಬರುತ್ತವೆ. ಹಾಗಾಗಿ ಆ ತರಬೇತಿಯನ್ನು ನಮಗೆ ನೀಡಿ. ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಎಂದು ಜಿಲ್ಲಾ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ ಜಯಲಕ್ಷ್ಮಿ ಅಭಿಪ್ರಾಯ ಪಟ್ಟಿದ್ದಾರೆ.

m-jayalakshmi
ಎಂ ಜಯಲಕ್ಷ್ಮಿ

By

Published : Nov 30, 2019, 4:53 AM IST

ಶಿವಮೊಗ್ಗ: ಅಂಗನವಾಡಿ ಕೇಂದ್ರದಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಎಂದು ಜಿಲ್ಲಾ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ ಜಯಲಕ್ಷ್ಮಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಪ್ರಕಾರ 3ರಿಂದ 8 ವರ್ಷದ ಒಂದು ವರ್ಗೀಕರಣ ಮಾಡಿ, ಆ ಮಾಧ್ಯಮವನ್ನು ಶಿಕ್ಷಣ ಇಲಾಖೆಯಡಿ ತೆರೆಯಬೇಕಾಗಿದೆ. ಇದರನ್ವಯ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಎಲ್​ಕೆಜಿ-ಯುಕೆಜಿ ಪ್ರಾರಂಭಿಸಲಾಗಿದೆ. ಇದರಿಂದ ಅಂಗನವಾಡಿ ಕೇಂದ್ರಗಳು ಮುಚ್ಚುವ ಅಪಾಯವಿದೆ. ಹಾಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಎಂದರು.

ಎಂ ಜಯಲಕ್ಷ್ಮಿ

ಅಂಗನವಾಡಿಗಳು ಮುಚ್ಚಿದರೆ ಇದನ್ನೆ ನೆಚ್ಚಿಕೊಂಡು ಬದುಕುತ್ತಿರುವ ಸಾವಿರಾರು ಕುಟುಂಬಗಳು ಬೀದಿಗೆ ಬರುತ್ತವೆ. ಹಾಗಾಗಿ ಆ ತರಬೇತಿಯನ್ನು ನಮಗೆ ನೀಡಿ, ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳನ್ನ ಮೇಲ್ದರ್ಜೆಗೆ ಏರಿಸಬೇಕು ಎಂದರು.

ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸುವ ನಾವುಗಳು ಸರ್ಕಾರದ ಅನೇಕ ಯೋಜನೆಗಳನ್ನ ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡುತ್ತೇವೆ ಎಂದರು.

For All Latest Updates

ABOUT THE AUTHOR

...view details