ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ ಪ್ರೇರಣಾ ಟ್ರಸ್ಟ್​​​ - Chief Minister Relief Fund

ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಿನ್ನೆಲೆ ಪರಿಹಾರ ಕಾರ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರೇರಣಾ ಟ್ರಸ್ಟ್​​ನಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಪ್ರೇರಣಾ ಟ್ರಸ್ಟ್

By

Published : Aug 10, 2019, 10:08 PM IST

Updated : Aug 10, 2019, 11:54 PM IST

ಶಿವಮೊಗ್ಗ: ನೆರೆ ಪರಿಸ್ಥಿತಿ ನಿಭಾಯಿಸಲು ಅನುಕೂಲವಾಗುವ ಉದ್ದೇಶದಿಂದ ಸಂಸದ ಬಿ.ವೈ.ರಾಘವೇಂದ್ರ, ಪ್ರೇರಣಾ ಟ್ರಸ್ಟ್​​ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಪ್ರೇರಣಾ ಟ್ರಸ್ಟ್ ವತಿಯಿಂದ 50 ಲಕ್ಷ ರೂ. ಚೆಕ್​​ಅನ್ನು ಸಂಸದರು ಜಿಲ್ಲಾಧಿಕಾರಿಗೆ ಹಸ್ತಾಂತರಿಸಿದರು.

ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ ಪ್ರೇರಣಾ ಟ್ರಸ್ಟ್

ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ:

ಸಂಸದರು ಇಲ್ಲಿನ ರಾಮಣ್ಣ ಶ್ರೇಷ್ಟಿ ಪಾರ್ಕ್‍ನಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತನಾಡಿದರು. ಪ್ರವಾಹಪೀಡಿತರಿಗೆ ಸರ್ಕಾರ ಎಲ್ಲಾ ನೆರವು ಒದಗಿಸಲಿದ್ದು, ಜನರು ಗಾಬರಿಗೊಳ್ಳುವ ಅಗತ್ಯವಿಲ್ಲ. ಪ್ರವಾಹ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದರು.

ಬಳಿಕ ಅವರು ನೆರೆ ನೀರು ಆವರಿಸಿರುವ ಕುಂಬಾರ ಗುಂಡಿ, ಭಾರತಿ ಕಾಲೋನಿ, ವಿದ್ಯಾನಗರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

Last Updated : Aug 10, 2019, 11:54 PM IST

ABOUT THE AUTHOR

...view details