ಕರ್ನಾಟಕ

karnataka

ETV Bharat / state

ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ವಿರುದ್ಧದ ಆರೋಪ ನಿರಾಧಾರ: ಅನಂತರಾವ್ - shimogga

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.ದತ್ತಾತ್ರಿ ಅವರು ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ. ಅವರ ಆರೋಪ ಸುಳ್ಳು. ಪ್ರಸನ್ನ ಕುಮಾರ್ ಶಾಸಕರಾದಾಗ ನಗರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದರು.

shimogga
ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಅನಂತರಾವ್

By

Published : Jul 22, 2020, 9:38 PM IST

ಶಿವಮೊಗ್ಗ: ಮಾಜಿ ಸೂಡಾ ಅಧ್ಯಕ್ಷರು ಹಾಗೂ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಗಿರುವ ಎಸ್. ದತ್ತಾತ್ರಿ ಅವರು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ವಿರುದ್ಧ ಮಾಡಿರುವ ಆರೋಪ ನಿರಾಧಾರವಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಅನಂತರಾವ್ ಹೇಳಿದರು.

ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಅನಂತರಾವ್

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.ದತ್ತಾತ್ರಿ ಅವರು ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ. ಅವರ ಆರೋಪ ಸುಳ್ಳು, ಪ್ರಸನ್ನ ಕುಮಾರ್ ಶಾಸಕರಾದಾಗ ನಗರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಯಾವುದೇ ಭ್ರಷ್ಟಾಚಾರ ನಡೆಸದೇ ಆಡಳಿತ ನಡೆಸಿದ್ದಾರೆ‌. ಹಾಗೆಯೇ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ಪರವಾಗಿ ವಿಧಾನಸೌಧದಲ್ಲಿ ಸತತವಾಗಿ ಧ್ವನಿ ಎತ್ತಿದ್ದಾರೆ. ಬ್ರಾಹ್ಮಣ ಅಭಿವೃದ್ಧಿ ನಿಗಮದ ರಚನೆಗೆ ಅವರ ಪಾತ್ರ ಪ್ರಮುಖವಾಗಿದೆ.

ಬ್ರಾಹ್ಮಣರು ಸೇರಿದಂತೆ ಮೀಸಲಾತಿಯಿಂದ ಹೊರಗುಳಿದ ಸಮುದಾಯಗಳಿಗೆ ಶೇ 10 ರಷ್ಟು ಮೀಸಲಾತಿ, ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಆಚಾರ್ಯತ್ರಯರ ಭವನ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹೀಗಿರುವಾಗ ಮಾಜಿ ಶಾಸಕರು ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ ಎಂದರು.

ABOUT THE AUTHOR

...view details