ಶಿವಮೊಗ್ಗ: ಪ್ರೆಸ್ ಟ್ರಸ್ಟ್ ನ ಪತ್ರಿಕಾ ಭವನ ಕಟ್ಟಡದ ಮುಂದುವರಿದ ಕಾಮಗಾರಿಗೆ ರಾಜ್ಯ ಸರ್ಕಾರದಿಂದ ಅನುದಾನ ಕೊಡಿಸುವಲ್ಲಿ ಸಹಕಾರ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.
ಸಂಸದ ರಾಘವೇಂದ್ರರನ್ನು ಸನ್ಮಾನಿಸಿದ ಪ್ರೆಸ್ ಟ್ರಸ್ಟ್ ಸದಸ್ಯರು - Shimoga latest news
ಶಿವಮೊಗ್ಗದ ಪತ್ರಿಕಾ ಭವನ ಕಟ್ಟಡದ ಕಾಮಗಾರಿಗೆ ಸರ್ಕಾರದಿಂದ ಅನುದಾನ ಕೊಡಿಸಿದ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಪ್ರೆಸ್ ಟ್ರಸ್ಟ್ ಸದಸ್ಯರು ಸನ್ಮಾನಿಸಿದರು.
ಪ್ರತಿ ತಿಂಗಳು ಜಿಲ್ಲಾ ಮತ್ತು ಮಧ್ಯಮ ಪತ್ರಿಕೆಗಳಿಗೆ ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಒಂದು ಪೂರ್ಣ ಪುಟದ ಜಾಹೀರಾತನ್ನು ಸರ್ಕಾರದಿಂದ ಕೊಡಿಸುವ ನಿಟ್ಟಿನಲ್ಲಿ ಸಹಕರಿಸಬೇಕು. ಎಸ್ಸಿ, ಎಸ್ಟಿ ಹಾಗೂ ಗಡಿನಾಡು ಪತ್ರಿಕೆಗಳಿಗೆ ಸರ್ಕಾರದಿಂದ ಮಂಜೂರಾದ ಅನುದಾನವನ್ನು ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಸೂಚಿಸಬೇಕು ಎಂದು ಸಂಸದರಲ್ಲಿ ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ಪ್ರಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಉಪಾಧ್ಯಕ್ಷ ಚಂದ್ರಹಾಸ್ ಹಿರೇಮಳಲಿ, ಕಾರ್ಯದರ್ಶಿ ನಾಗರಾಜ್ ನೇರಿಗೆ, ಖಜಾಂಚಿ ಜೇಸುದಾಸ್ , ಟ್ರಸ್ಟಿಗಳಾದ ಗಿರೀಶ ಉಮ್ರಾಯ್, ವೈ.ಕೆ. ಸೂರ್ಯನಾರಾಯಣ್, ಗೋಪಾಲ ಯಡಗೆರೆ ಮತ್ತಿತರರಿದ್ದರು.