ಶಿವಮೊಗ್ಗ: ನಗರದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಈಗಾಗಲೇ ನಗರಕ್ಕೆ ಮೋದಿ ಆಗಮಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಮಾದರಿಯನ್ನು ಪರಿಶೀಲಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ.. ಮೋದಿಯನ್ನು ಬರಮಾಡಿಕೊಂಡ ಬಿಜೆಪಿ ನಾಯಕರು - ಸಿಎಂ ಬಸವರಾಜ್ ಬೊಮ್ಮಾಯಿ
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಅವರನ್ನು ಬಿಜೆಪಿ ನಾಯಕರು ಬರಮಾಡಿಕೊಂಡಿದ್ದಾರೆ.
![ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ.. ಮೋದಿಯನ್ನು ಬರಮಾಡಿಕೊಂಡ ಬಿಜೆಪಿ ನಾಯಕರು Prime Minister Narendra Modi inspects Modi inspects the model of Shivamogga Airport Prime Minister Narendra Modi ಮೋದಿಯನ್ನು ಬರಮಾಡಿಕೊಂಡ ಬಿಜೆಪಿ ನಾಯಕರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ನಗರಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣ ಸಿಎಂ ಬಸವರಾಜ್ ಬೊಮ್ಮಾಯಿ ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ](https://etvbharatimages.akamaized.net/etvbharat/prod-images/768-512-17860117-989-17860117-1677480325500.jpg)
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ
ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು. ವಿಮಾನ ನಿಲ್ದಾಣ ಲೋಕಾರ್ಪಣೆಗೆ ಹಾಗೂ ಇತರೆ ಕಾಮಗಾರಿಗಳ ಲೋಕಾರ್ಪಣೆಗೆ ಸರ್ವ ರೀತಿಯಲ್ಲಿ ಸಿದ್ಧತೆ ಮಾಡಲಾಗಿದ್ದು, ಇಡೀ ನಗರವೇ ಪ್ರಧಾನಿ ಸ್ವಾಗತಕ್ಕಾಗಿ ಸಿಂಗಾರಗೊಂಡಿದೆ.
ಓದಿ:ಅಭಿಮಾನಿಗಳು ತಂದ 80 ಕೆಜಿ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡ ರಾಜಾಹುಲಿ..