ಶಿವಮೊಗ್ಗ:ನಗರದ ಶಿವಪ್ಪನಾಯಕ ಅರಮನೆಯಲ್ಲಿ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ನಿಮಿತ್ತ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಹಾಗೂ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಹಾಗೂ ಮಹಿಳಾ ಹೋರಾಟಗಾರರ ಕುರಿತು ಕಾರ್ಯಕ್ರಮ
75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ನಿಮಿತ್ತ ಹಾಗೂ ಇಂದಿಗೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಹಾಗೂ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಶಿವಮೊಗ್ಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮತ್ತು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವನ್ನು ಶಿವಮೊಗ್ಗ ಉಪ ವಿಭಾಗಾಧಿಕಾರಿ ಪ್ರಕಾಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದೇಶದ ಇತಿಹಾಸವನ್ನು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಅಗತ್ಯ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಉಮೇಶ್ ಪುರಾತತ್ವ ಇಲಾಖೆ ಅಧಿಕಾರಿ ಶೇಜೇಶ್ವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.