ಶಿವಮೊಗ್ಗ:ಜೂನ್-ಜುಲೈನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಶಿವಮೊಗ್ಗ ನಗರದ 07 ಕೇಂದ್ರಗಳಲ್ಲಿ ನಿನ್ನೆ (ಜು. 13) ಆರಂಭಗೊಂಡಿದ್ದು, 23ರವರೆಗೆ ಪ್ರತಿದಿನ ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ನಡೆಯಲಿದೆ.
ಶಿವಮೊಗ್ಗ: ಎಸ್ಎಸ್ಎಲ್ಸಿ ಮೌಲ್ಯಮಾಪನ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ - ಮೌಲ್ಯ ಮಾಪನ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
ಎಸ್ಎಸ್ಎಲ್ಸಿ ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶಿಸಿದ್ದಾರೆ.
ಸದರಿ ಮೌಲ್ಯಮಾಪನ ಕಾರ್ಯವು ಶಾಂತಿಯುತವಾಗಿ, ಯಾವುದೇ ಅವ್ಯವಹಾರಗಳಿಗೆ ಅವಕಾಶವಿಲ್ಲದಂತೆ ಮುಂಜಾಗ್ರತಾ ಕ್ರಮ ವಹಿಸಲು ಹಾಗೂ ಕಟ್ಟುನಿಟ್ಟಾಗಿ ನಡೆಸಲು ಅಗತ್ಯ ಕ್ರಮ ವಹಿಸಲಾಗಿದ್ದು, ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಮೌಲ್ಯಮಾಪಕರು ಹಾಗೂ ಮೌಲ್ಯಮಾಪನಕ್ಕೆ ಸಂಬಂಧಪಟ್ಟ ಸಿಬ್ಬಂದಿ, ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಮೌಲ್ಯಮಾಪನ ಕೇಂದ್ರಗಳ ಪ್ರದೇಶ ಪ್ರವೇಶಿಸುವುದನ್ನು, ಐದು ಮತ್ತು ಐದಕ್ಕಿಂತ ಹೆಚ್ಚು ಜನರು ನಿಷೇಧಿತ ವ್ಯಾಪ್ತಿಯಲ್ಲಿ ಸೇರುವುದನ್ನು, ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ನಿರ್ಬಂಧಿತ ಪ್ರದೇಶದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳುವವರೆಗೆ ರಾತ್ರಿ 10ರ ನಂತರ ಯಾವುದೇ ಝೆರಾಕ್ಸ್ ಅಂಗಡಿಗಳು ತೆರೆಯುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
TAGGED:
Shimogga news