ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಇಂದಿನಿಂದ ಜುಲೈ 03 ರವರೆಗೆ ಜಿಲ್ಲೆಯ 84 ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Prohibition Enforcement on SSLC exam centers in Shimoga
ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

By

Published : Jun 25, 2020, 4:37 AM IST

ಶಿವಮೊಗ್ಗ: ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಇಂದಿನಿಂದ ಜುಲೈ 03 ರವರೆಗೆ ಜಿಲ್ಲೆಯ 84 ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಅಂಗಡಿಗಳು ರಾತ್ರಿ 10 ಗಂಟೆಗಳ ನಂತರ ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳೊಳಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಈ ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಮೊಬೈಲ್ ಬಳಕೆಯನ್ನು ನಿಷೇದಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ನೀಡಿದ್ದಾರೆ.

ABOUT THE AUTHOR

...view details