ಶಿವಮೊಗ್ಗ:ನಗರದಲ್ಲಿ ವಿಧಿಸಿದ್ದ ನಿಷೇಧಾಜ್ಞೆ ಅವಧಿಯನ್ನು ಇಂದಿನಿಂದ ಸಡಿಲಿಕೆ ಮಾಡಲಾಗಿದೆ. ಆದರೆ ಮದ್ಯಂಗಡಿಗಳನ್ನು ಮಾತ್ರ ಸಂಜೆ 7 ಗಂಟೆಯೊಳಗೆ ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ: ನಿಷೇಧಾಜ್ಞೆ ಅವಧಿ ಸಡಿಲಿಸಿ ಜಿಲ್ಲಾಧಿಕಾರಿ ಆದೇಶ - ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಅವಧಿ ಸಡಿಲಿಕೆ
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಸದ್ಯ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಮರಳುತ್ತಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಅವಧಿಯನ್ನು ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಅವಧಿ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಆದೇಶ
ನಗರದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಉಂಟಾಗಿದ್ದ ಗಲಭೆ, ಕಲ್ಲು ತೂರಾಟದಿಂದಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ-ವಹಿವಾಟಿಗೆ ಅವಕಾಶ ಕಲ್ಪಿಸಲಾಗಿತ್ತು.
ಇದನ್ನೂ ಓದಿ: ಚೊಚ್ಚಲ ಬಜೆಟ್ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆ ಏನು?