ಶಿವಮೊಗ್ಗ: ಸರ್ಕಾರ ರಚನೆ ಮಾಡಿರುವ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಪಡಿಸಬೇಕು ಹಾಗೂ ಸಿಗಂದೂರು ದೇವಸ್ಥಾನಕ್ಕೆ ನೇಮಿಸಿರುವ ಸಲಹಾ ಸಮಿತಿಯನ್ನು ಸಹ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕರವೇ ಪ್ರತಿಭಟನೆ - ಶಿವಮೊಗ್ಗ ಪ್ರತಿಭಟನೆ ನ್ಯೂಸ್
ರಾಜ್ಯದ ಜನ ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಕನ್ನಡನಾಡಿಗೆ ದ್ರೋಹ ಮಾಡಿದ್ದಾರೆ. ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.
ರಾಜ್ಯದ ಜನ ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಕನ್ನಡನಾಡಿಗೆ ದ್ರೋಹ ಮಾಡಿದ್ದಾರೆ. ಪ್ರವಾಹದಲ್ಲಿ ಸಿಲುಕಿದವರಿಗೆ ಇನ್ನೂ ಪುನರ್ವಸತಿ ಕಲ್ಪಿಸಿಕೊಡದ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರಿಗೆ ದೀಪಾವಳಿಯ ಉಡುಗೊರೆ ನೀಡಿದೆ. ಹಾಗಾಗಿ ಸಿಎಂ ಕೊಡಲೇ ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದುಗೊಳಿಸಬೇಕು. ಜೊತೆಗೆ ಸಿಗಂದೂರು ದೇವಸ್ಥಾನಕ್ಕೆ ನೇಮಿಸಿರುವ ಸಲಹಾ ಸಮಿತಿಯನ್ನು ಸಹ ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.