ಶಿವಮೊಗ್ಗ: ಭಾರತ ಬಹುಸಂಸ್ಕೃತಿಯ, ಬಹುಭಾಷೆಯ ದೇಶ. ಹೀಗಾಗಿ ಜನರ ಮೇಲೆ ಹಿಂದಿಯನ್ನು ಹೇರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಿಂದಿ ಹೇರಿಕೆ ವಿರುದ್ಧ ಶಿವಮೊಗ್ಗದಲ್ಲಿ ಕರವೇ ಪ್ರತಿಭಟನೆ - ಕರವೇ ಪ್ರತಿಭಟನೆ
ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡಲು ಹೊರಟಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಿಂದಿ ಭಾಷೆಯನ್ನು ಹೇರಿಕೆ ಮಾಡಬಾರದು, ಪ್ರಾದೇಶಿಕ ಭಾಷೆಗೆ ಒತ್ತು ನೀಡಬೇಕೆಂದು ಕರವೇ ಆಗ್ರಹಿಸಿದೆ.
ಶಿವಮೊಗ್ಗದಲ್ಲಿ ಕರವೇ ಪ್ರತಿಭಟನೆ
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಹಿಂದಿಯನ್ನು ಎಲ್ಲರ ಮೇಲೆ ಹೇರುವ ಸಲುವಾಗಿ ಇಂದು ಹಿಂದಿ ದಿವಸ್ ಆಚರಿಸಲಾಗುತ್ತಿದೆ ಎಂದು ಆರೋಪಿಸಿದ್ರು.
ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರಿಕೆ ಮಾಡಬಾರದು, ಪ್ರಾದೇಶಿಕ ಭಾಷೆಗೆ ಒತ್ತು ನೀಡಬೇಕೆಂದು ಆಗ್ರಹಿಸಲಾಯಿತು. ಕರವೇ ಜಿಲ್ಲಾಧ್ಯಕ್ಷ ಮಂಜುನಾಥ್ ಕೋಟ್ಯಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.