ಶಿವಮೊಗ್ಗ :ಮಹಾತ್ಮ ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಜಿಲ್ಲಾ ಉತ್ತರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಶಿವಮೊಗ್ಗದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ - Protest by Shimoga District Congress
ಮಹಾತ್ಮ ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಉತ್ತರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಾಲರಾಜ್ ಅರಸ್ ರಸ್ತೆಯ ಮೂಲಕ ಸಾಗಿ ಬಂದು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಸಂಸದ ಅನಂತ್ ಕುಮಾರ್ ಹೆಗಡೆ, ಗಾಂಧೀಜಿಯವರ ಸ್ವಾತಂತ್ಯ ಸತ್ಯಾಗ್ರಹವನ್ನು ವ್ಯಂಗ್ಯ ಮಾಡಿ ಗಾಂಧೀಜಿಯವರಿಗೆ ಅವಮಾನ ಮಾಡಿದ್ದಾರೆ. ಅಲ್ಲದೆ ಗಾಂಧೀಜಿ ಹತ್ಯಾ ಪ್ರಕರಣದ ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಅನಂತ್ ಕುಮಾರ್ ಹೆಗಡೆಯವರನ್ನು ತಕ್ಷಣ ಸಂಸತ್ ಸದಸ್ಯ ಸ್ಥಾನದಿಂದ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗಡೆ, ಉತ್ತರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.