ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣ ಎದುರಿಗೆ 33 ಕೋಟಿ ರೂ. ವೆಚ್ಚದಲ್ಲಿ ಮೊದಲನೇ ಮಹಡಿಯಲ್ಲಿ ನಿರ್ಮಾಣ ಆಗುತ್ತಿರುವ ಹಾಕಿ ಕ್ರೀಡಾಂಗಣ ಯೋಜನೆಯನ್ನು ವಿರೋಧಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ, ಫುಟ್ಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ಒಲಂಪಿಕ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗದಲ್ಲಿ ಹಾಕಿ ಕ್ರೀಡಾಂಗಣ ನಿರ್ಮಾಣ ವಿರೋಧಿಸಿ ಪ್ರತಿಭಟನೆ - Shivamogga protest news
ನೆಹರು ಕ್ರೀಡಾಂಗಣದ ಎದುರಿಗೆ ಮೊದಲನೇ ಮಹಡಿಯಲ್ಲಿ ಹಾಕಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಇದೊಂದು ಅವೈಜ್ಞಾನಿಕ ಯೋಜನೆ ಹಾಗೂ ದುಂದು ವೆಚ್ಚದ ಯೋಜನೆ ಆಗಿದ್ದು ಕೂಡಲೇ ಈ ಯೋಜನೆಯನ್ನು ಕೈ ಬೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ, ಫುಟ್ಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ಒಲಂಪಿಕ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗದಲ್ಲಿ ಪ್ರತಿಭಟನೆ
ನೆಹರು ಕ್ರೀಡಾಂಗಣದ ಎದುರಿಗೆ ಮೊದಲನೇ ಮಹಡಿಯಲ್ಲಿ ಹಾಕಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಇದೊಂದು ಅವೈಜ್ಞಾನಿಕ ಯೋಜನೆ ಹಾಗೂ ದುಂದು ವೆಚ್ಚದ ಯೋಜನೆ ಆಗಿದ್ದು, ಕೂಡಲೇ ಈ ಯೋಜನೆಯನ್ನು ಕೈ ಬೀಡಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ ಅವರಿಗೆ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಿಯಮಾವಳಿಗಳಂತೆ ಕ್ರೀಡಾಂಗಣ ನಿರ್ಮಾಣ ಆಗುತ್ತಿಲ್ಲ. ವೀಕ್ಷಕರ ಗ್ಯಾಲರಿ ಸಹ ಇರುವುದಿಲ್ಲ. ಹಾಗಾಗಿ ಈ ಯೋಜನೆಯನ್ನು ಕೈ ಬೀಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.