ಕರ್ನಾಟಕ

karnataka

ETV Bharat / state

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ - ಶಿವಮೊಗ್ಗ ಪ್ರತಿಭಟನೆ

ಕೊರೊನಾ ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ವೈದ್ಯಕೀಯ ಸಂರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಕೊರೊನಾ ಸೋಂಕಿಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ಸರ್ಕಾರವೇ ನೀಡಬೇಕು..

asha
asha

By

Published : Jul 24, 2020, 3:29 PM IST

ಶಿವಮೊಗ್ಗ :ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಹತ್ತು ವರ್ಷಗಳಿಂದ ಆಶಾ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಆದರೂ ಸರ್ಕಾರ ಮಾತ್ರ ನಮ್ಮ ನೆರವಿಗೆ ಧಾವಿಸುತ್ತಿಲ್ಲ. ಸಿಗುವ ವೇತನದಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12,000 ಗೌರವಧನ ಖಾತರಿಪಡಿಸಬೇಕು ಎಂದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕೊರೊನಾ ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ವೈದ್ಯಕೀಯ ಸಂರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಕೊರೊನಾ ಸೋಂಕಿಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ಸರ್ಕಾರವೇ ನೀಡಬೇಕು ಎಂದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ABOUT THE AUTHOR

...view details