ಶಿವಮೊಗ್ಗ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ವಿಳಂಬ ಹಾಗೂ ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.
ಮನೆಗಳ ಅವೈಜ್ಞಾನಿಕ ನಿರ್ಮಾಣ ವಿರೋಧಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಪ್ರತಿಭಟನೆ
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ವಿಳಂಬ ಹಾಗೂ ಅವೈಜ್ಞಾನಿಕವಾಗಿ ಮನೆಗಳ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ
ಮಹಾನಗರ ಪಾಲಿಕೆಯ 9 ಘೋಷಿತ ಕೊಳಚೆ ಪ್ರದೇಶಗಳಲ್ಲಿ, ಕೊಳಚೆ ಪ್ರದೇಶ ಅಭಿವೃದ್ಧಿ ನಿಗಮದ ವತಿಯಿಂದ ಪ್ರಧಾನ ಮಂತ್ರಿ ಅವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿಯಲ್ಲಿ 1,590 ಮನೆಗಳ ನಿರ್ಮಾಣ ಕಾಮಗಾರಿಯನ್ನು ಕಳೆದ ವರ್ಷ ಜನವರಿಯಲ್ಲೇ ಪ್ರಾರಂಭಿಸಲಾಗಿತ್ತು. ಆದ್ರೆ ಮನೆ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಕೂಡಲೇ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.